Mysore/New Delhi News:
ಪರವಾನಗಿರಹಿತ ತಂಬಾಕು ಬೆಳೆಗಾರರು ಎಫ್‌ಸಿವಿ ತಂಬಾಕು ಮಾರಾಟ ಮಾಡಲು ಅವಕಾಶ ನೀಡಲು ಹಾಗೂ ದಂಡ ವಿಧಿಸದೇ ಇರಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸಂಸದ ಯದುವೀರ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ.
ಇದರಿಂದ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದರು. ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.
ಸಂಸದರ ಮನವಿಗೆ ಸ್ಪಂದಿಸಿರುವ ಕೇಂದ್ರ, ಬೆಳಗಾರರಿಗೆ ಖುಷಿ ಸುದ್ದಿ ನೀಡಿದೆ.ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡುವಂತೆ ಬಿಜೆಪಿ ಸಂಸದ ಯದುವೀರ್ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.ಕರ್ನಾಟಕದ ತಂಬಾಕು ಬೆಳೆಗಾರರ ಸಂಕಷ್ಟ ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಮರ್ಪಕ ನಿರ್ಧಾರ ಕೈಗೊಂಡಿದೆ ಎಂದು ಅವರು ತಿಳಿಸಿದರು.ಎಫ್‌ಸಿವಿ ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ.
40,487 ನೋಂದಾಯಿತ ಹಾಗೂ 12,838 ಪರವಾನಗಿರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ. ಕೇಂದ್ರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಇದು FARMERSನ್ನು ಸಂಕಷ್ಟಕ್ಕೆ ದೂಡಿತ್ತು ಎಂದು ಮನವರಿಕೆ ಮಾಡಿಕೊಡಲಾಗಿತ್ತು ಎಂದು ಯದುವೀರ್ ಹೇಳಿದರು.ಕಳೆದ ಮೇ ಮತ್ತು ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ತಂಬಾಕು ಬೆಳೆ ನಷ್ಟವಾಗಿತ್ತು. ಬೆಳೆ ಉಳಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರಿಂದ ಒಟ್ಟಾರೆಯಾಗಿ ಬೆಳೆಗಾರರಿಗೆ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿತ್ತು.ಫೆಬ್ರವರಿ 6ರಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿರಿ :Assam Man’s Tryst With Wildlife Over 4000 Animals, Reptiles & Birds