ವಿಜಯಪುರ ಜಿಲ್ಲೆ: ಜಿಲ್ಲೆಯ ಮಮದಾಪುರ ಅರಣ್ಯ ಪ್ರದೇಶಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯತಾಣ ಮರುನಾಮಕರಣ ಮಾಡಲು ಸರ್ಕಾರವು ನಿರ್ಧರಿಸುವುದಾಗಿ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿ ಅವರು ಆಧ್ಯಾತ್ಮಿಕ ಬೋಧನೆಗಳ ಜೊತೆಗೆ ಸಂರಕ್ಷಣೆ ಮತ್ತು ಸಮುದಾಯದ ಯೋಗಕ್ಷೇಮಕ್ಕೆ ಅಪಾರ ಕೊಡುಗೆ ನೀಡಿರುವ ಉದ್ದೇಶದಿಂದ ಶ್ರೀಗಳ ಎರಡನೇ ಪುಣ್ಯಸ್ಮರಣೆಯ ದಿನವಾದ ಜನವರಿ 2ರಂದು ವಿಧ್ಯುಕ್ತವಾಗಿ ಮಮದಾಪುರ ಅರಣ್ಯ ಪ್ರದೇಶಕ್ಕೆ ಮರು ನಾಮಕರಣ ಮಾಡಲಾಗುವುದು ಎಂದು ಅವರು ಹೇಳಿದರು.
ಅಲ್ಲಿಯ ಸ್ಥಳೀಯ ಜನರು ಪಾರಂಪರಿಕ ತಾಣ ಘೋಷಣೆಯಿಂದ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಪಾರಂಪರಿಕವಾಗಿ ತಾಣದ ನಿರ್ವಹಣೆಯಲ್ಲಿ ಸ್ಸ್ಥಾಲಿಯ ಸಹಕಾರ ಅಗತ್ಯವಾಗಿ ಬೇಕಾಗಿದೆ ಎಂದು ತಿಳಿಸಿದರು.