spot_img
spot_img

ರೈತರ ಪುತ್ರರನ್ನು ವಿವಾಹವಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸ ಮೀಸಲಾತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮೈಸೂರು: ಡಿ.23ರಂದು ವಿಶ್ವ ರೈತ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ರೈತ ಸಮಾವೇಶವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.

“ರೈತರ ಪುತ್ರರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಶೇ.20ರಷ್ಟು ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು” ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

“ತೆಲಂಗಾಣ ಮಾದರಿಯಲ್ಲಿ 60 ವರ್ಷ ತುಂಬಿದ ರೈತರಿಗೆ 10 ಸಾವಿರ ರೂ ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ರಾಜ್ಯದಲ್ಲಿ 10 ಲಕ್ಷ ರೈತರು ಬಗರ್‌ಹುಕುಂ ಸಾಗುವಳಿ ಮಾಡುತ್ತಿದ್ದಾರೆ, ಕೂಡಲೇ ಅವರಿಗೆ ಬೇಷರತ್ತಾಗಿ ಸಾಗುವಳಿ ಪತ್ರ ನೀಡಬೇಕು. ಯುವಕರ ಭವಿಷ್ಯ ಹಾಳು ಮಾಡುತ್ತಿರುವ ಆನ್‌ಲೈನ್ ಗೇಮ್, ಜೂಜು ರಾಜ್ಯದಲ್ಲಿ ನಿಷೇಧಿಸಬೇಕು ಎಂಬ ತಮ್ಮ ಹಕ್ಕೊತ್ತಾಯಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು” ಎಂದು ಹೇಳಿದರು.

“ಕೃಷಿ ಸಾಲ ನೀತಿ ಬದಲಾಗಬೇಕು. ಭೂಮಿ ಮೌಲ್ಯಕ್ಕೆ ಅನುಗುಣವಾಗಿ ಸಾಲ ನೀಡುವಂತಾಗಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್, ರೈತರ ಕೃಷಿ ಸಾಲ ವಸೂಲಾತಿಗಾಗಿ ರೂಪಿಸಿರುವ ಸರ್ಪ್ರೈಸಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಕೃಷಿ ಪಂಪ್‌ಸೆಟ್​ಗಳಿಗೆ ಹಗಲಿನಲ್ಲಿ ಸಮರ್ಪಕ ವಿದ್ಯುತ್ ನೀಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಬೇಕು” ಎಂದು ಒತ್ತಾಯಿಸಿದರು.

ಪಿಡಬ್ಲ್ಯೂಡಿ ಅತಿಥಿ ಗೃಹದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಎಪಿಎಂಸಿಗಳಲ್ಲಿ ದಲ್ಲಾಳಿಗಳು ರೈತರಿಂದ ಶೇ.10ರಷ್ಟು ಕಮಿಷನ್ ವಸೂಲಿ ನಿಲ್ಲಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎನ್‌ಡಿಆರ್​ಎಫ್​ ಮಾನದಂಡ ಬದಲಾಗಬೇಕು. ಮಳೆಹಾನಿ, ಬರ ಪರಿಹಾರ, ಪ್ರಕೃತಿ ವಿಕೋಪ ಪರಿಹಾರದ ಮಾನದಂಡ ಬದಲಾಯಿಸಿ ಸಂಪೂರ್ಣ ನಷ್ಟ ಪರಿಹಾರ ನೀಡಬೇಕು” ಎಂದರು.

“ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಆಗಬೇಕು. ಕೃಷಿ ಉಪಕರಣಗಳು, ರಸಗೊಬ್ಬರ, ಕೀಟನಾಶಕಗಳ ಮೇಲೆ ವಿಧಿಸಿರುವ ಜಿಎಸ್‌ಟಿ ಸುಂಕ ರದ್ದಾಗಬೇಕು. ಮಹಿಳಾ ಸಂಘಗಳಿಗೆ ಸಾಲ ನೀಡುವ ಮೈಕ್ರೋಫೈನಾನ್ಸ್ ಕಿರುಕುಳ ನಿಲ್ಲಿಸಲು ಕಠಿಣ ಕಾನೂನು ಜಾರಿಯಾಗಬೇಕು. ಕೃಷಿ ಮೇಳಗಳ ಬದಲು ರೈತರ ನೆನಪಿನ ಹಬ್ಬದ ದಿನಾಚರಣೆಗಳಾಗಬೇಕು” ಎಂದರು.

“ಪರಿಸರ ಸಂರಕ್ಷಿಸಲು ಸಾವಿರಾರು ಮರ ಬೆಳೆಸಿದ ಕಂಪನಿ, ಸಂಸ್ಥೆಗಳಿಗೆ ಶೇ.25ರಷ್ಟು ತೆರಿಗೆ ವಿನಾಯಿತಿ ನೀಡಬೇಕು. ಕಬ್ಬಿನ ಎಫ್​ಆರ್‌ಪಿ ದರ ರೈತರ ಹೊಲದಲ್ಲಿನ ದರ ಎಂದು ನಿಗದಿ ಮಾಡುವ ಮಾನದಂಡ ಜಾರಿಯಾಗಬೇಕು. ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕಡಿಮೆ ತೋರಿಸುವ ಕಾರ್ಖಾನೆಗಳ ಮೋಸ ತಪ್ಪಿಸಲು ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

“ಡಿ.23ರಂದು ವಿಶ್ವ ರೈತ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ರೈತ ಸಮಾವೇಶವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ” ಎಂದು ತಿಳಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

CRISTMAS IN BANGALORE – ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿ ಜೋರು

Bangalore News: ಹಬ್ಬದ ಪ್ರಯುಕ್ತ ರಾಜಧಾನಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿ ಭರಾಟೆಯೂ ಜೋರಾಗಿದೆ. ಯೇಸುಕ್ರಿಸ್ತನ ಜನನ ದಿನವಾದ ನಾಳೆ (ಡಿ.25) ನಡೆಯಲಿರುವ ಕ್ರಿಸ್‌ಮಸ್‌...

ISRO SPADEX MISSION – ಇಸ್ರೋದ ಸ್ಪ್ಯಾಡೆಕ್ಸ್ ಮಿಷನ್ಗೆ ಶುರುವಾಯ್ತು ದಿನಗಣನೆ

ISRO Spadex Mission: ಡಿಸೆಂಬರ್ 30 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ 'ಸ್ಪ್ಯಾಡೆಕ್ಸ್' ಮಿಷನ್ ಅನ್ನು ಇಸ್ರೋ ಪ್ರಾರಂಭಿಸಲಿದೆ.ಇನ್ನು ಕೆಲವೇ ದಿನಗಳಲ್ಲಿ...

KUMBHAMELA SPECIAL TRAIN – ಪ್ರಯಾಗ್ ರಾಜ್ಗೆ ಹುಬ್ಬಳ್ಳಿ, ಮೈಸೂರಿನಿಂದ ವಿಶೇಷ ರೈಲು

Hubli News: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಹುಬ್ಬಳ್ಳಿ ಹಾಗೂ ಮೈಸೂರಿನಿಂದ ಪ್ರಯಾಗ್ ರಾಜ್​​ಗೆ ವಿಶೇಷ ಏಕಮುಖ ಎಕ್ಸ್ ಪ್ರೆಸ್...

SALUMARADA TIMMAKKA PARK – ಬಯಲುಸೀಮೆಯಲ್ಲಿ ಹಸಿರು ಸಸ್ಯೋದ್ಯಾನ

Haveri News: ಸುಮಾರು 20 ಎಕರೆ ವಿಸ್ತೀರ್ಣದಲ್ಲಿರುವ ಸಸ್ಯೋದ್ಯಾನದಲ್ಲಿ ವಿವಿಧ ಬಗೆಯ ಸಾವಿರಾರು ಗಿಡಗಳನ್ನು ಬೆಳೆಸಲಾಗಿದೆ. ಗಿಡಗಳು ಹಸಿರಿನಿಂದ ಕಂಗೊಳಿಸುತ್ತಿದ್ದು, ಮನಸ್ಸಿಗೆ ಮುದ ನೀಡುತ್ತವೆ. ಅಲಂಕಾರಿಕ...