spot_img
spot_img

GOVT SCHOOLS CLOSED : ಚಾಮರಾಜನಗರದಲ್ಲಿ 20 ಸರ್ಕಾರಿ ಶಾಲೆಗಳು ಬಂದ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Chamarajanagar News:

ಶೂನ್ಯ ದಾಖಲಾತಿಯಿಂದಾಗಿ ಚಾಮರಾಜನಗರದ  GOVT SCHOOLS CLOSED. ಸರ್ಕಾರಿ ಶಾಲೆಗೆ ಸೇರಿಸಬೇಕೆಂದರೆ ಪ್ರಿ ಕೆಜಿ, ಇಂಗ್ಲಿಷ್ ಮಾಧ್ಯಮ, ಶಾಲಾ ವಾಹನ ಸೌಲಭ್ಯದ ಬೇಡಿಕೆಗಳನ್ನು ಪೋಷಕರು ಮುಂದಿಡುತ್ತಿದ್ದಾರೆ. 2023-24ರಲ್ಲಿ 12 ಮತ್ತು ಈ ಸಾಲಿನಲ್ಲಿ 8 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು ಶೂನ್ಯ ದಾಖಲಾತಿಯಿಂದ ಬಂದ್ ಆಗಿವೆ.

ಪ್ರಿ ಕೆಜಿಗಳನ್ನು ಆರಂಭಿಸಿದರೆ, ಇಂಗ್ಲಿಷ್ ಮಾಧ್ಯಮ ಇದ್ದರೆ, ಶಾಲಾ ವಾಹನ ಸೌಲಭ್ಯ ಕಲ್ಪಿಸಿದರೆ ಮಾತ್ರ ಸರ್ಕಾರಿ ಶಾಲೆಗೆ ಸೇರಿಸುವುದಾಗಿ ಪೋಷಕರು ಶಿಕ್ಷಣ ಇಲಾಖೆಗೆ ತಿಳಿಸುತ್ತಿದ್ದಾರೆ. ಇಂಗ್ಲಿಷ್​​ ಮೇಲಿನ ಅಕ್ಕರೆ, ಕಾನ್ವೆಂಟ್​​​​ ವ್ಯಾಮೋಹ ಹಾಗೂ ಸಾರಿಗೆ ತೊಂದರೆಯಿಂದಾಗಿ ಕಳೆದೆರಡು ಶೈಕ್ಷಣಿಕ ವರ್ಷಗಳಲ್ಲಿ 20 ಸರ್ಕಾರಿ ಶಾಲೆಗಳು ಬಂದ್​ ಆಗಿವೆ.

Which schools are closed?:

ಗುಂಡ್ಲುಪೇಟೆ ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ಬರಗಿ ಕಾಲೊನಿ, ಮೇಲುಕಾಮನಹಳ್ಳಿ, ಮರಳಾಪುರ ಶಾಲೆ 2024-25ನೇ ಸಾಲಿನಲ್ಲಿ ಹುತ್ತೂರು, ಕಬ್ಬಳ್ಳಿ, ಈದ್ಗಾ ಮೊಹಲ್ಲಾ, ಹಕ್ಕಲಪುರ ಶಾಲೆಗಳು ಬಂದ್ ಆಗಿದ್ದು ಮುಚ್ಚಲ್ಪಟ್ಟಿದ್ದ ಹೊಸಪುರ, ಉತ್ತನಗೆರೆಹುಂಡಿ ಶಾಲೆಗಳು ಪುನಾರಂಭಗೊಂಡಿವೆ.

2023 ಮತ್ತು 24ನೇ ಸಾಲಿನಲ್ಲಿ ಚಾಮರಾಜನಗರ ತಾಲೂಕಿನ ಸಾಣೇಗಾಲ, ಕಳ್ಳಿಪುರ, ಪುಟ್ಟೇಗೌಡನಹುಂಡಿ, ಹೊಸಹಳ್ಳಿ 2024-25ನೇ ಸಾಲಿನಲ್ಲಿ ಮೂಡ್ಲುಪುರ, ಗೆಜ್ಜಲ್ ಪಾಳ್ಯ, ಅಂಚಿತಾಳಪುರ, ಗೋವಿಂದವಾಡಿ, ಕುರುಬರಹುಂಡಿ GOVT SCHOOLS CLOSED. ಮುಚ್ಚಲ್ಪಟ್ಟಿದ್ದ ಕಿರಗಸೂರು ಶಾಲೆಯನ್ನು ಪುನಾರಂಭಿಸಲಾಗಿದೆ. ಹನೂರು ತಾಲೂಕಿನಲ್ಲಿ 2024-25ನೇ ಸಾಲಿನಲ್ಲಿ ಚಂಗಡಿ, ಎಡಳಿದೊಡ್ಡಿ ಶಾಲೆಗಳು, ಯಳಂದೂರು ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ದಾಸನಹುಂಡಿ‌ ಶಾಲೆಗಳು ಬಂದ್ ಆಗಿವೆ.

Education Department Response:

ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡಿದ್ದು ಅವರೂ ಕೂಡ ಇದನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಪಾಲಕರ ಬೇಡಿಕೆಯನ್ನು ಪುರಸ್ಕರಿಸಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯೋಜನೆ ಹಾಕುತ್ತಿದ್ದೇವೆ. 4 ಉರ್ದು ಶಾಲೆಗಳಿರುವ ಊರಿನಲ್ಲಿ ಮುಸ್ಲಿಂ ಸಮುದಾಯದ ಮಕ್ಕಳೇ ಇಲ್ಲ. ಆ ಹಿನ್ನೆಲೆಯಲ್ಲಿ ಅದನ್ನು ಕನ್ನಡ ಮತ್ತು ಉರ್ದು ದ್ವಿಭಾಷಾ ಶಾಲೆಯನ್ನಾಗಿ ಪರಿವರ್ತಿಸಲು ಮುಂದಾಗಿದ್ದೇವೆ.

ಶಾಲಾ ವಾಹನ, ಸಾರಿಗೆ ಸೌಲಭ್ಯ ಕೊಟ್ಟರೆ ಮಕ್ಕಳನ್ನು ಕಳುಹಿಸುತ್ತೇವೆ ಎಂಬುದು ಕೂಡ ಹಲವು ಪಾಲಕರ ಬೇಡಿಕೆಯಾಗಿದೆ. ಇದಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಿಎಸ್ಆರ್ ಫಂಡ್​ನಿಂದ ಶಾಲಾ ವಾಹನ ಕಲ್ಪಿಸುವ ಮತ್ತು ದಾನಿಗಳಿಂದ ಸರ್ಕಾರಿ ಶಾಲೆಯನ್ನು ದುರಸ್ತಿಪಡಿಸಲು ಮುಂದಾಗಿದ್ದೇವೆ ಎಂದರು.

ಇದನ್ನು ಓದಿರಿ : LONE WOMEN MURDER CASE : ಒಂಟಿ ಮಹಿಳೆಯರ ಕೊಲೆ ಪ್ರಕರಣ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...