ದಾವಣಗೆರೆ: ರಾಜ್ಯದ ಮೊದಲ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಎಂಬ ಹೆಗ್ಗಳಿಕೆ ಹೊಂದಿರುವ ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು (ಯುಬಿಡಿಟಿ)ಗಳಲ್ಲಿ ‘ಯುಬಿಡಿಟಿ ಉಳಿಸಿ, ಪೇಮೆಂಟ್ ಸೀಟ್ ರದ್ದುಪಡಿಸಿ’ ಎಂದು ಒತ್ತಾಯಿಸಿ ಅ. 16ರಂದು ಎಐಡಿಎಸ್ಒ, ಯುಬಿಡಿಟಿ ವಿದ್ಯಾರ್ಥಿಗಳ ಹೋರಾಟ ಸಮಿತಿಯು ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ದಾವಣಗೆರೆ ಬಂದ್ ಗೆ ಕರೆ ನೀಡಲಾಗಿದೆ.
ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಶಶಿಕಲಾ, ಐಎಡಿಎಸ್ ಒ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಸುಮನ್, ಹಾಗೂ ಹಲವು ರಾಜ್ಯ ನಾಯಕರನ್ನೊಳಗೊಂಡಂತೆ ಯುಬಿಡಿಟಿ ವಿದ್ಯಾರ್ಥಿ ಹೋರಾಟ ಸಮಿತಿಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ವಿರುದ್ಧ ಹೋರಾಟ ನಡೆಸಲು ಮುಂದಾದರೆ ಪ್ರತಿಭಟನೆ ನಡೆಸುವವರ ಹಕ್ಕು ಕಿತ್ತುಕೊಳ್ಳುವ ಸರ್ಕಾರದ ನಡೆಗೆ ನಮ್ಮ ವಿರೋಧ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರದ ಈ ನಡೆ ಅತ್ಯಂತ ಖಂಡನೀಯ ಹಾಗೂ ವಿದ್ಯಾರ್ಥಿ ವಿರೋಧಿಯಾಗಿದೆ .
ರಾಜ್ಯ ಸರಕಾರ ವಿದ್ಯಾರ್ಥಿಗಳ ಹೋರಾಟದ ಹಕ್ಕಿನ ಮೇಲೆ ಮಾಡುತ್ತಿರುವ ಪ್ರಹಾರವಾಗಿದೆ.
ಸ್ಥಳೀಯ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜು ಉಳಿಸುವಂತೆ ಹೋರಾಟ ನಡೆಸುತ್ತಿರುವ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಇಂದು ದಾವಣಗೆರೆ ಬಂದ್‌ಗೆ ಕರೆ ನೀಡಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪೇಮೆಂಟ್ ಕೋಟಾದಡಿ ಸೀಟು ಹಂಚಿಕೆ ವ್ಯವಸ್ಥೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.
ಈಗಾಗಲೇ ಯುಬಿಡಿಟಿ ಕಾಲೇಜಿನಿಂದ ಆರಂಭವಾದ ಬೈಕ್ ರ‍್ಯಾಲಿ ನಗರದ ಹಲವು ರಸ್ತೆಗಳಲ್ಲಿ ಸಾಗಿ ಜಯದೇವ ವೃತ್ತದಲ್ಲಿ ಕೊನೆಗೊಂಡಿದೆ.
‘ಎಂಜಿನಿಯರಿಂಗ್ ಸೀಟು ಹೆಚ್ಚಿನ ಹಣಕ್ಕೆ ಮಾರಾಟ ಮಾಡುವುದನ್ನು ನಿಲ್ಲಿಸಿ’, ‘ಕಾಲೇಜು ಉಳಿಸಲು ಸ್ವಯಂಪ್ರೇರಿತ ಬಂದ್‌ಗೆ ಸಹಕರಿಸಿ’ ಎಂಬ ಭಿತ್ತಿಪತ್ರಗಳನ್ನು ಇದೇ ಸಂದರ್ಭದಲ್ಲಿ ಪ್ರದರ್ಶಿಸಲಾಗಿದೆ.
ಪೇಮೆಂಟ್ ಕೋಟಾ ರದ್ದುಪಡಿಸಬೇಕು ಹಾಗೂ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವ ಯುಬಿಡಿಟಿ ಕಾಲೇಜಿಗೆ ಅನುದಾನ ನೀಡಬೇಕು ಎಂಬ ಆಗ್ರಹ ವಿದ್ಯಾರ್ಥಿ ಸಂಘಟನೆಯದ್ದು. ರ‍್ಯಾಲಿಯ ಸ್ಥಳಕ್ಕೆ ಭೇಟಿ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮುಖ್ಯಮಂತ್ರಿಗೆ ತಲುಪಿಸಬೇಕಿರುವ ಮನವಿ ಪತ್ರ ಸ್ವೀಕರಿಸಿದ್ದಾರೆ.
‘ಆರ್ಥಿಕವಾಗಿ ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಪಾಲಿಗೆ ಯುಬಿಡಿಟಿ ಕಾಲೇಜು ವರದಾನವಾಗಿದೆ.
ಸುಪ್ರಿಂಕೋರ್ಟ್ ತೀರ್ಪಿನ ಪ್ರಕಾರ ಬಂದ್ ಮಾಡುವಂತಿಲ್ಲ, ನಾವು ಬಂದ್ ಮಾಡಲು ಯಾರಿಗೂ ಅವಕಾಶ ನೀಡಿಲ್ಲ ಎಂದು ಜಿಲ್ಲಾಧಿ ಕಾರಿ ಡಾ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
‘ಸಾಮಾನ್ಯ ಜನರ ಜೀವನ, ವಾಹನ ಹಾಗೂ ಆಸ್ತಿಗೆ ಹಾನಿ ಮಾಡುವಂತಿಲ್ಲ. ರಸ್ತೆ ತಡೆ, ವಾಹನ ಅಡ್ಡಗಟ್ಟಿ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ. ತುರ್ತು ಮತ್ತು ಅಗತ್ಯ ಸೇವೆಗೆ ತೊಂದರೆ ಮಾಡುವಂತಿಲ್ಲ. ಪ್ರತಿಕೃತಿ ದಹನ, ಟೈರ್‌ಗಳನ್ನು ಸುಡುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.