spot_img
spot_img

2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಕ್ಯಾನ್ಸಲ್ ! ಸಿಕ್ಕದ್ದಷ್ಟೇ ಅವರ ಪಾಲಿನ ‘ಪಂಚಾಮೃತ’.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಕಂತು ಬಂದಿಲ್ಲ ಎಂದು 2-3  ತಿಂಗಳಿಂದ ನೀವು ಹಾದಿ ನೋಡುತ್ತಿದ್ದರೆ, ನಿಮ್ಮಲ್ಲಿ ಬಹುತೇಕರಿಗೆ ಈ ಯೋಜನೆಯೇ ರದ್ದಾಗಿರುವ ಸಾಧ್ಯತೆ ಇರುತ್ತದೆ. ಹೌದು ಸದ್ದಿಲ್ಲದೆ ಐಟಿ,ಜಿಎಸ್‌ಟಿ ಯೋಜನೆ.

ರಾಜ್ಯ ಸರಕಾರದ ಪಂಚ ‘ಗ್ಯಾರಂಟಿ’ ಗಳಲ್ಲಿಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ಸದ್ದಿಲ್ಲದೆ ಐಟಿ (ಆದಾಯ ತೆರಿಗೆ) ಶಾಕ್‌ ನೀಡಿದೆ. ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಇನ್ನು ಮುಂದೆ ಗೃಹಲಕ್ಷ್ಮೀ ಹಣ ಸಿಗಲ್ಲ.ಇದುವರೆಗೆ ಸಿಕ್ಕದ್ದಷ್ಟೇ ಅವರ ಪಾಲಿನ ‘ಪಂಚಾಮೃತ’. ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿದಾರ ಮಹಿಳೆಯರನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಹೊರಗಿಡಲಾಗಿದೆ. IT GST ಪಾವತಿದಾರರ ಪಟ್ಟಿ ಸಿದ್ಧವಾಗಿದ್ದು, ಅವರಿಗೆ ಯೋಜನೆ ಸ್ಥಗಿತಗೊಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪರಿಶೀಲಿಸಿ

ಕಳೆದ 2-3 ತಿಂಗಳಿಂದ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂದಿಲ್ಲ. ಇವತ್ತು – ನಾಳೆ ಅಷ್ಟೂ ತಿಂಗಳ ಹಣ ಒಟ್ಟಿಗೇ ಬರುತ್ತದೆ ಎಂದು ನಿರೀಕ್ಷಿ ಇಟ್ಟುಕೊಳ್ಳುವುದು ಹಾಗೂ ಬ್ಯಾಂಕ್‌ಗಳಿಗೆ ಪದೇಪದೆ ಈ ಉದ್ದೇಶದಿಂದ ಅಲೆಯುವುದು ಬೇಡ. ಸ್ಥಳೀಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಾಲಯದಲ್ಲಿ ವಿಚಾರಿಸಿದರೆ ಕಾರಣ ಸ್ಪಷ್ಟವಾಗಲಿದೆ. ಎನ್‌ಪಿಸಿಐ ಇನ್‌ ಆಕ್ಟಿವ್‌ ಆದ ಫಲಾನುಭವಿಗಳಿಗೂ ಹಣ ಖಾತೆಗೆ ಜಮೆಯಾಗಿಲ್ಲ.

ಆಧಾರ್‌ ಲಿಂಕ್‌, ಬ್ಯಾಂಕ್‌ ಖಾತೆ ಜೋಡಣೆ ಮೊದಲಾದ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ ಕಾರಣದಿಂದ ಯೋಜನೆ ಹಣ ಬರದಿದ್ದರೆ ಅಪ್‌ಡೇಟ್‌ ಮಾಡಿಸಿಕೊಂಡ ಹಾಗೂ ಸಮಸ್ಯೆ ಬಗೆಹರಿದ ಕೂಡಲೇ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಖಾತೆಗೆ ಜಮೆ ಆಗಲಿದೆ.

ಇದನ್ನೂ ಓದಿ: ಹ್ಯಾಂಡಲ್ ಮಾಡೋದು ನಮ್ಗೂ ಗೊತ್ತಿದೆ ; ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.!

2 ಲಕ್ಷ ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ

ರಾಜ್ಯದ 1.28 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಲ್ಲಿ ಸದ್ಯದ ಲಭ್ಯ ಮಾಹಿತಿ ಪ್ರಕಾರ ಸುಮಾರು 2 ಲಕ್ಷ ಮಹಿಳೆಯರನ್ನು ಐಟಿ, ಜಿಎಸ್‌ಟಿ ಪಾವತಿ ಕಾರಣದಿಂದ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ. ತುಮಕೂರು ಜಿಲ್ಲೆಯೊಂದರಲ್ಲೇ ಐಟಿ, ಜಿಎಸ್‌ಟಿ ಕಟ್ಟುವ 7,343 ಮಹಿಳೆಯರು ಗೃಹಲಕ್ಷ್ಮೀ’ಯಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ:ನಾಗಮಂಗಲ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ; ಸಚಿವ ಪರಮೇಶ್ವರ ಹೇಳಿದ್ದಾರೆ.!

ಅಧಿಕೃತ ಹಿಂಬರಹ

ಐಟಿ, ಜಿಎಸ್‌ಟಿ ಪಾವತಿದಾರ ಮಹಿಳೆಯರು ‘ಗೃಹಲಕ್ಷ್ಮೀ’ ಹಣ ಬಂದಿಲ್ಲವೆಂದು ಕಚೇರಿಗೆ ಅಲೆಯುತ್ತಿದ್ದರೆ, ಅವರನ್ನು ಆ ಉದ್ದೇಶಕ್ಕಾಗಿ ಅಲೆಸಬಾರದು. ಜಿಎಸ್‌ಟಿ, ಐಟಿ ಪಾವತಿದಾರರಾಗಿರುವುದರಿಂದ ನಿಮಗೆ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಸಿಗುವುದಿಲ್ಲಎಂದು ಅಧಿಕೃತವಾಗಿಯೇ ಹಿಂಬರಹ ನೀಡುವಂತೆ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆದೇಶಿಸಿದ್ದಾರೆ.

ಐಟಿ, ಜಿಎಸ್‌ಟಿ ಕ್ಯಾತೆ ಏಕೆ?

ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಐದು ಗ್ಯಾರಂಟಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದ ವೇಳೆ, ‘ತನ್ನ ಪತ್ನಿಗೂ ಸೇರಿದಂತೆ ಪ್ರತಿಯೊಬ್ಬ ಮಹಿಳೆಯರಿಗೂ ಗ್ಯಾರಂಟಿ ಲಾಭ ಸಿಗಲಿದೆ. ಗೃಹಲಕ್ಷ್ಮೀ ಯೋಜನೆ ಹಣ 2000 ರೂ. ಮಾಸಿಕವಾಗಿ ಬ್ಯಾಂಕ್‌ ಖಾತೆಗೆ ಸಂದಾಯವಾಗಲಿದೆ’ ಎಂದಿದ್ದರು. ಆದರೆ ಈಗ ‘ಷರತ್ತುಬದ್ಧ ಗ್ಯಾರಂಟಿ’ ನೀಡಿಕೆ ಟೀಕೆಗೆ ಅಸ್ತ್ರವಾಗುತ್ತಿದೆ.

ಇದನ್ನೂ ಓದಿ:ಮಾರುತಿ ಸುಜುಕಿ ಕಾರು ಒಂದು ಬಾರಿ ಚಾರ್ಜ್ ಮಾಡಿದ್ರೆ 500km ಚಲಿಸುತ್ತೆ .! ಹೊಸ ಎಲೆಕ್ಟ್ರಿ ವಾಹನ.

ಐಟಿ, ಜಿಎಸ್‌ಟಿ ಪಾವತಿದಾರರನ್ನು ಗೃಹಲಕ್ಷ್ಮೀ ಯೋಜನೆಯಿಂದ ಕೈಬಿಡಲಾಗಿದೆ. ಫಲಾನುಭವಿಗಳ ಪಟ್ಟಿಯಿಂದ ಕೈಬಿಟ್ಟವರಿಗೆ ಅಧಿಕೃತವಾಗಿಯೇ ಹಿಂಬರಹ ನೀಡುವಂತೆ ಸೂಚಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...