spot_img
spot_img

GRIHALAKSHMI MONEY TO DEVADASIS : ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

spot_img
spot_img

Share post:

ಬೆಳಗಾವಿ: ದೇವದಾಸಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆ ಹಾಗೂ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಸಹಾಯಧನ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹ ಲಕ್ಷ್ಮೀ ಯೋಜನೆಯ ನೆರವು ದೊರೆಯುತ್ತಿದೆ. ಇನ್ನು ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.

ಶುಕ್ರವಾರ ವಿಧಾನಪರಿಷತ್ತಿನಲ್ಲಿ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ”ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ., ಆರ್ಥಿಕ ಸಹಾಯ ಯೋಜನೆಯಡಿ 30‌ ಸಾವಿರ ರೂ. ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಇದೇ ವೇಳೆ, ”ರಾಜ್ಯದಲ್ಲಿ ಹೊಸದಾಗಿ 3,988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

”ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6,018 ದೇವದಾಸಿ ಮಹಿಳೆಯರನ್ನು ಸಮೀಕ್ಷೆಯಲ್ಲಿ ಗುರುತಿಸಿದ್ದು 2,653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು. ಅದೇ ರೀತಿ ಅನಿಷ್ಟವಾಗಿರುವ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ವ್ಯಕ್ತಪಡಿಸಿದರು.

ಪರಿಷತ್​​ ಸದಸ್ಯ ಜವರಾಯಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ”ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆಯ ಅವಶ್ಯಕತೆ ಇರುತ್ತದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ.20ರಷ್ಟು ಇರುತ್ತದೆ” ಎಂದರು.

‘ಸದ್ಯ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65,931 ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನುದಾನಿತ 3,988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಈಗ 3,988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದರು.

”ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿರುತ್ತದೆ. ಮುಂದುವರೆದು, ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ” ಎಂದು ತಿಳಿಸಿದರು.

”ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22,923 ಲಕ್ಷ ರೂ. ಅನುದಾನ ಬಿಡುಗಡೆಯಾಗಿರುತ್ತದೆ. ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದೆ ” ಎಂದು ಸದನಕ್ಕೆ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...