WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Health benefits of flax Seed:
ಅಗಸೆ ಬೀಜಗಳು ಚಿಕ್ಕದಾಗಿ ಕಂಡರೂ, ಇದರಿಂದ ಮಾತ್ರ ಅನೇಕ ಆರೋಗ್ಯದ ಪ್ರಯೋಜನಗಳು ಲಭಿಸುತ್ತವೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಅಗಸೆ ಬೀಜಗಳನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್, ಮಧುಮೇಹ ಸೇರಿದಂತೆ ಹಲವು ರೋಗಗಳನ್ನು ನಿಯಂತ್ರಣದಲ್ಲಿಡಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಅಗಸೆ ಬೀಜಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅಗಸೆ ಬೀಜದಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಇದರಲ್ಲಿ ವಿಟಮಿನ್-ಬಿ1, ಪ್ರೊಟೀನ್, ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್, ತಾಮ್ರ, ಫೋಲೇಟ್, ಮೆಗ್ನೀಸಿಯಮ್, ಮ್ಯಾಂಗನೀಸ್, ಸತು ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ.
Benefits of Roasted Flaxseed:
- ಹುರಿದ ಅಗಸೆ ಬೀಜಗಳನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಯಾಗುತ್ತದೆ. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಒಂದು ಚಮಚ ಹುರಿದ ಅಗಸೆ ಬೀಜಗಳನ್ನು ಸೇವಿಸಿದರೆ ಅವರ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.
- ಹುರಿದ ಅಗಸೆ ಬೀಜಗಳನ್ನು ತಿನ್ನುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಇದು ಕರಗುವ ಫೈಬರ್ ಅನ್ನು ಹೊಂದಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
- ಅಗಸೆ ಬೀಜಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಮಧುಮೇಹದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
- ಆರೋಗ್ಯ ತಜ್ಞರ ಪ್ರಕಾರ, ಅಗಸೆ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿವೆ. ಇದು ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸಲು ಸಹ ಸಹಾಯ ಮಾಡುತ್ತದೆ. ಅಜೀರ್ಣದ ಸಂದರ್ಭದಲ್ಲಿ, ಹುರಿದ ಅಗಸೆಬೀಜದ ಪುಡಿಯ ಸೇವನೆಯು ಅತ್ಯಂತ ಪ್ರಯೋಜನಕಾರಿಯಾಗಿದೆ.
- ಅಗಸೆ ಬೀಜಗಳು ಗ್ಯಾಸ್ಟ್ರಿಕ್, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಅಜೀರ್ಣದಂತಹ ಸಮಸ್ಯೆಗಳನ್ನು ನಿವಾರಿಸಲು, ನೀವು ಬಿಸಿನೀರಿನೊಂದಿಗೆ ಹುರಿದ ಅಗಸೆಬೀಜದ ಪುಡಿಯನ್ನು ಸೇವಿಸಬಹುದು.
- ಹುರಿದ ಅಗಸೆಬೀಜವನ್ನು ಸೇವಿಸುವುದರಿಂದ ನಿದ್ರಾಹೀನತೆಯ ಸಮಸ್ಯೆಗೆ ದೂರವಾಗಿಸಲು ಸಹಾಯ ಮಾಡುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡುವ ಮೂಲಕ ನಿದ್ರೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಗಸೆ ಬೀಜಗಳು ಫೈಬರ್ ಅನ್ನು ಹೊಂದಿರುತ್ತವೆ.
- ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಹಾಗೂ ಜೀರ್ಣ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ. ಮಾಂಸಾಹಾರಿ ತಿನ್ನುವವರು ಮೊಟ್ಟೆಯ ಬದಲು ಅಗಸೆ ಬೀಜಗಳನ್ನು ಸೇವಿಸುವುದು ಉತ್ತಮ.
- ಚಳಿಗಾಲದಲ್ಲಿ ನೆಗಡಿ, ಕೆಮ್ಮಿನಂಥ ಸೀಸನ್ ಕಾಯಿಲೆಗಳು ಸಾಮಾನ್ಯವಾಗಿರುತ್ತವೆ. ಇಂತಹ ಕಾಯಿಲೆಗಳಿಂದ ದೂರವಿರಲು ಅಗಸೆ ಬೀಜಗಳನ್ನು ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.
- ಅಗಸೆ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಅಮೈನೋ ಆಮ್ಲಗಳನ್ನು ಸಹ ಹೊಂದಿರುತ್ತವೆ. ಇವು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.