ಬೆಂಗಳೂರು: ಕರ್ನಾಟಕದಲ್ಲಿ ಪ್ರಮುಖವಾಗಿ ಬೆಂಗಳೂರಿನಲ್ಲಿ 6 ಸೆಂಮೀ, ಪುತ್ತೂರಿನಲ್ಲಿ 2 ಸೆಂಮೀ ಬೆಳಗಾವಿಯಲ್ಲೂ 2 ಸೆಂಮೀ ಆಗಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ.
ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 24 ರಿಂದ ಅಕ್ಟೋಬರ್ 26 ರವರೆಗೆ ಒಣಹವೆ ಇರಲಿದೆ. ಅಕ್ಟೋಬರ್ 27 ರಿಂದ 30 ರವರೆಗೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವು ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಡಾನಾ ಚಂಡಮಾರುತದ ಹಿನ್ನಲೆಯಲ್ಲಿ ಅಕ್ಟೋಬರ್ 25 ರಂದು ಹೊರಡುವ ರೈಲು ಸಂಖ್ಯೆ 22883 ಪುರಿ-ಯಶವಂತಪುರ ಗರೀಬ್ ರಥ ಸಾಪ್ತಾಹಿಕ ಎಕ್ಸ್‌ಪ್ರೆಸ್, ಅಕ್ಟೋಬರ್ 26 ರಂದು ಹೊರಡುವ ರೈಲು ಸಂಖ್ಯೆ 22884 ಯಶವಂತಪುರ-ಪುರಿ ಗರೀಬ್ ರಥ ಸಾಪ್ತಾಹಿಕ ಎಕ್ಸ್‌ಪ್ರೆಸ್ ಮತ್ತು ಅಕ್ಟೋಬರ್ 27 ರಂದು ಹೊರಡುವ ರೈಲು ಸಂಖ್ಯೆ 12510 ಗುವಾಹಟಿ- ಎಸ್ಎಂವಿಟಿ ಬೆಂಗಳೂರು ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಪೂರ್ವ ಕರಾವಳಿ ಮತ್ತು ಈಶಾನ್ಯ ಗಡಿ ರೈಲ್ವೆ ವಲಯವು ರದ್ದು ಪಡಿಸಲಾಗಿದೆ ಎಂದು ಸೂಚಿಸಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now