spot_img
spot_img

ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ಶಾಲೆಗಳಿಗೆ ರಜೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಚೆನ್ನೈ: ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ ಮತ್ತು ಪುದುಚೇರಿಯ ಕಾರೈಕಲ್‌ನ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮಂಗಳವಾರದಿಂದ ಮೋಡ ಕವಿದ ವಾತಾವರಣವಿದೆ.

ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಿರುವಾರುರ್​​ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್​ ಅಲರ್ಟ್​ ನೀಡಿದೆ. ಜೊತೆಗೆ ಕಡಲೂರು, ಮಯಿಲದುತ್ತುರೈ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಬುಧವಾರದವರೆಗೂ ರೆಡ್​ ಅಲರ್ಟ್​ ಘೋಷಿಸಲಾಗಿದೆ.

ವಿಲ್ಲುಪುರಂ, ಕಡಲೂರು, ಅರಿಯಲೂರ್​​, ತಂಜಾವೂರ್​, ಪುಡುಕೊಟ್ಟೈ, ಶಿವಗಂಗಾ ಜಿಲ್ಲೆಗಳೂ ಸೇರಿದಂತೆ ಪುದುಚೇರಿಯಲ್ಲಿ 11.56 ಸೆಂ.ಮೀನಿಂದ 20.44 ಸೆಂ.ಮೀವರೆಗೆ ಸಾಧಾರಣದಿಂದ ಅತಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ದಿಕ್ಕಿಗೆ ಗಾಳಿ ಬಲಗೊಳ್ಳುವ ಸಾಧ್ಯತೆ ಇದೆ. ಚಂಡಮಾರುತ ಶ್ರೀಲಂಕಾ ಮತ್ತು ತಮಿಳುನಾಡು ಕರಾವಳಿಯ ಉತ್ತರ ಮತ್ತು ವಾಯುವ್ಯ ದಿಕ್ಕಿನೆಡೆಗೆ ಸಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಮನಾಥಪುರಂ, ತತಿರುಚಿರಪಳ್ಳಿ, ಪೆರಂಬಲೂರ್​, ಕಲಕುರಿಚಿ, ಚೆಂಗಲ್​ಪಟ್ಟು ಜಿಲ್ಲೆಗಳಲ್ಲೂ ಕೂಡ ಮಂಗಳವಾರ ಜೋರು ಮಳೆಯಾಗುವ ಸಾಧ್ಯತೆ ಇದೆ.

ಅರಿಯಲೂರ್​​, ತಿರುವರೂರ್​, ನಗಪತ್ತಿನಂ, ತಾಂಜಾವೂರ್​, ಪುದುಕೊಟ್ಟೈ, ವಿಲ್ಲುಪುರಂ ಮತ್ತು ತಿರುಚ್ಚಿ, ಕಾಂಚೀಪುರಂ, ಚೆನ್ನೈ, ಚೆಂಗಲ್​ಪೆಟ್ಟು ಜಿಲ್ಲೆ ಹಾಗೂ ಪುದುಚೇರಿಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ನವೆಂಬರ್​ 28ರವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ತಮಿಳುನಾಡಿನ ಸುಮಾರು 90 ಅಣೆಕಟ್ಟುಗಳು ಶೇ 60ರಷ್ಟು ಭರ್ತಿಯಾಗಿದೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...