ಬಂಗಾಳಕೊಲ್ಲಿಯಲ್ಲಿ ವಾಯುಭಾರ ತೀವ್ರವಾಗಿ ಕುಸಿದ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆನ್ನಲ್ಲೇ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಮಳೆರಾಯ ಆರ್ಭಟಿಸಲು ಶುರುಮಾಡಿದ್ದಾನೆ.
ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರೀಕ್ಷೆ ಮಾಡಿದೆ.
ನಾಳೆ ತಮಿಳುನಾಡು ಭಾಗದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಸಾಧ್ಯತೆ ಇದೆ ಎಂದಿದೆ. ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಚದುರಿದ ಮಳೆಯ ಹಾಗೂ ಮಂಜು ಕೂಡ ಬೀಳುವ ಸಾಧ್ಯತೆ ಇದೆ. ಕೇರಳ ಕರ್ನಾಟಕ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದಿದೆ.
ನವೆಂಬರ್ 27 ರಂದು ಕೂಡ ತಮಿಳುನಾಡಲ್ಲಿ ಮಳೆ ಬೀಳಲಿದೆ. ತಮಿಳು ನಾಡು ಹಾಗೂ ಕೇರಳ ಭಾಗದಲ್ಲಿ ಮಳೆಯಾಗಲಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂನಲ್ಲಿ ಚಳಿಯ ವಾತಾವರಣ ಹೆಚ್ಚಾಗಿರಲಿದೆ. ದಟ್ಟ ಮಂಜು ಬೀಳಲಿದೆ ಎಂದು ತಿಳಿಸಿದೆ. ಅಂಡಮನ್, ನಿಕೊಬಾರ್ ಐಲ್ಯಾಂಡ್ನಲ್ಲಿ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶದಲ್ಲಿ ಮಳೆ ಬೀಳಲಿದೆ ಎಂದು ತಿಳಿಸಿದೆ.