Rain Alert:
ರಾಜ್ಯದಲ್ಲಿ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ! ಯಾವ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಕಂಡು ಬರುತ್ತೆ ಎಂದು ನೀವೇ ನೋಡಿ !
ರಾಜ್ಯದಲ್ಲಿ ಭರಾಟೆಯ ಮಳೆ(Rain Alert)
ರಾಜ್ಯದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಆಗಸ್ಟ್ 2ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಿ ಮಳೆ? ಮತ್ತು Rain Alert! ಘೋಷಣೆ?
ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ನಿರಂತರ ಗಾಳಿಯ ವೇಗವು (30-40s ಕಿಮೀ) ತಲುಪುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ತಾಲೂಕಿನಲ್ಲಿ ಭರಾಟೆಯ ಮಳೆ ಯಾವ ತಾಲೂಕು ಎಂದು ನೀವು ಕಾಮೆಂಟ್ ಬಾಕ್ಸ್ ನಲ್ಲಿ ಬರೆಯಿರಿ!
ಇನ್ನು ಯಾವ ಜಿಲ್ಲೆಗಳಲ್ಲಿ ಮಳೆ?
ಚಿಕ್ಕಮಗಳೂರು,ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ.
ವರುಣನ ಅಬ್ಬರ ಎಲ್ಲಿ?
ಈ ತಿಂಗಳು, ಅಂದರೆ ಜುಲೈನಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲೂ ಮುಂಗಾರು ಮಳೆ ವಾಡಿಕೆಗಿಂತ 48% ಹೆಚ್ಚಾಗಿ ಸುರಿದಿದೆ. ನಿರೀಕ್ಷೆಯಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ವಾಡಿಕೆಗಿಂತ ಹೆಚ್ಚಾಗಿದೆ.
ಯಾವ ಜಿಲ್ಲೆಗಳಿಗೆ ಯಾವ Rain Alert…?
೧. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 3 ರವರೆಗೆ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
೨. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 2, 3 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
೩. ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2, 3 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
೪. ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಆಗಸ್ಟ್ 2 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯಾದ್ಯಂತ ಬೀಸುವ ಗಾಳಿಯ ವೇಗ 30-40 ಕಿಮೀ ಇರಲಿದೆ.
ಎಲ್ಲಿ ಮೋಡ ಕವಿದ ವಾತಾವರಣ?
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು. ಇದು ಎಲ್ಲಿ ಎಂದು ನಾವು ನಿಮಗೆ ಹೇಳುತ್ತೇವೆ ನೀವೇ ಓದಿ, ಅದು ಎಲ್ಲಿ ಅಂದರೆ ನಮ್ಮ ರಾಜ್ಯದ ರಾಜಧಾನಿ ಬೆಂಗಳೂರು.
ಇನ್ನಷ್ಟು ಓದಿರಿ:
ಬಿಎಸ್ವೈ, ವಿಜಯೇಂದ್ರ ವಿರುದ್ಧ ದೂರು ನೀಡಲು ಯತ್ನಾಳ್ 01/08/2024 ರಂದು ತಂಡ ತೀರ್ಮಾನ?
ಕೇರಳ ಗುಡ್ಡ ಕುಸಿತ: ಸಂತ್ರಸ್ತರ ನೆರವಿಗೆ ಕೈಜೋಡಿಸಲುವಯನಾಡಿಗೆ ಪ್ರಯಾಣ ಬೆಳೆಸಿದ ಸಚಿವ ಸಂತೋಷ್ ಲಾಡ್