ಬೆಂಗಳೂರು: ಅ.21ರಂದು ಸೋಮವಾರ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಅ.22 ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ.
ಅದೇ ರೀತಿ ಅ.23ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ ಇರಲಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಕೆಲವೊಮ್ಮೆ ತುಂಬಾ ಜೋರಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26° C ಮತ್ತು 20 ° C ಆಗಿರಬಹುದು.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಉತ್ತರ ಕನ್ನಡ, ಉಡುಪಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now