Bangalore News:
HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ಈ ಸೂಚನೆ ನೀಡಿ HIGH COURTಅರ್ಜಿ ವಿಚಾರಣೆ ಮಾರ್ಚ್ 6ಕ್ಕೆ ಮುಂದೂಡಿತು.
ಇದಕ್ಕೆ ಸರ್ಕಾರಿ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಕೋರಿದರು. ಇದರಿಂದ ಅರ್ಜಿ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿತು.
ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಯ ಜಾಗವನ್ನು ಮೌಲಾನಾ ಅಜಾದ್ ಮೊರಾರ್ಜಿ ವಸತಿ ಶಾಲೆಗೆ ಹಸ್ತಾಂತರಿಸಿ ಸರ್ಕಾರ ಹೊರಡಿಸಿದ ಆದೇಶ ರದ್ದು ಮಾಡಬೇಕು ಎಂದು ಕೋರಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ HIGH COURT ಸೂಚಿಸಿದೆ.
What is the plea of the applicant?:
ಸಚಿವರಾಗಿರುವ ಜಮೀರ್ ಅಹಮದ್ ಖಾನ್ ಅವರ ಸೂಚನೆ ಮೇರೆಗೆ ಚಾಮರಾಜಪೇಟೆ ಛಲವಾದಿ ಪಾಳ್ಯದಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಯ ಜಾಗವನ್ನು ಮೌಲಾನಾ ಅಜಾದ್ ಮೊರಾರ್ಜಿ ವಸತಿ ಶಾಲೆಗೆ ಹಸ್ತಾಂತರಿಸಿ ರಾಜ್ಯ ಸರ್ಕಾರವು 2024ರ ಫೆ.26ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.
ಇದನ್ನು ಓದಿರಿ : Himanshu Sangwan Reveals The Story Behind Dismissal Of Virat Kohli In Ranji Trophy