Bangalore News:
HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ HIGH COURT, ತನ್ನ ಆದೇಶವನ್ನು ಕಾಯ್ದಿರಿಸಿದೆ.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ HIGH COURT, ತನ್ನ ಆದೇಶವನ್ನು ಕಾಯ್ದಿರಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿತು.
ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಮತ್ತಿತರರ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ಅದನ್ನು ಸ್ವೀಕರಿಸಲಾಗುವುದಿಲ್ಲ. ದೂರುದಾರ ಮಹಿಳೆ ಪದೇ ಪದೆ ದೂರು ದಾಖಲಿಸುವುದು ಅವರ ನಡುವಳಿಕೆ ತೋರಿಸುತ್ತದೆ.
ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಮತ್ತಿತರ ಪ್ರಮುಖ ವ್ಯಕ್ತಿಗಳ ವಿರುದ್ಧ ದೂರು ನೀಡುವುದು ಅಭ್ಯಾಸ ಮಾಡಿಕೊಂಡಿದ್ದಾರೆ. ಅಲ್ಲದೇ , ಗಂಡ ಮತ್ತು ಮಗನ ಮೇಲೆಯೂ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.
ವಾದ ಆಲಿಸಿದ ಪೀಠ ವಿಚಾರಣೆ HIGH COURT ಮುಂದೂಡಿತು. ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪಿಸಿ, ಯಡಿಯೂರಪ್ಪ ವಿರುದ್ದದ ಆರೋಪಕ್ಕೆ ಸಾಕಷ್ಟು ಪುರಾವೆಗಳಿಗೆ. ಹೀಗಾಗಿ ಪ್ರಕರಣ ರದ್ದು ಪಡಿಸಬಾರದು ಎಂದು ವಾದಿಸಿದ್ದರು.
ಇದನ್ನು ಓದಿರಿ : PM MODI INAUGURATES BMGE 2025 : ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ ಉದ್ಘಾಟಿಸಿದ ಪ್ರಧಾನಿ ಮೋದಿ