ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಅಹ್ಮದಾಬಾದ್ ಮತ್ತು ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ದು ಅವರಲ್ಲಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸೌಲಭ್ಯ ಸಾಧ್ಯವಾದರೆ ಅದು ಹುಬ್ಬಳ್ಳಿ – ಧಾರವಾಡ ಭಾಗದ ಜನರಿಗಷ್ಟೇ ಅಲ್ಲದೆ, ಉತ್ತರ ಕರ್ನಾಟಕದ ಹಲವಾರು ಜನರಿಗೆ ಸಹಾಯವಾಗುತ್ತದೆ.
ಅಹ್ಮದಾಬಾದ್ ಮತ್ತು ಚೆನ್ನೈ ನಗರಗಳಿಗೆ ವಿಮಾನ ಸಾರಿಗೆ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡಿದಲ್ಲಿ ಉದ್ಯಮಿಗಳ ತ್ವರಿತ ಸಂಚಾರ ಮತ್ತು ನಿಕಟ ಸಂಪರ್ಕಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಛೋಟಾ ಮುಂಬೈ ಎಂದೇ ಹೆಸರಾದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಅನೇಕ ಉದ್ಯಮಿಗಳ ಸಂಪರ್ಕವಿದೆ.
ಈ ವಿಮಾನಯಾನವನ್ನು ಮುಂದುವರೆಸುವಂತೆ ಸಚಿವ ನಾಯ್ಡು ಅವರಲ್ಲಿ ಮನವಿ ಮಾಡಿದರು.
ರೈಲ್ವೆ ನಿಲ್ದಾಣದ ಜತೆ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ಮೆರುಗಿನಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಸಚಿವ ನಾಯ್ಡು ಅವರ ಗಮನ ಸೆಳೆದರು
‘‘ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬೇಲ್ ಮೇಲಿರುವುದರಿಂದ ಸಿದ್ದರಾಮಯ್ಯ ರಾಜೀನಾಮೆ ಕೇಳಲು ಅವರಿಗೆ ಮುಖವಿಲ್ಲ,’’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.