spot_img
spot_img

ಐಎಎಸ್​, ಐಪಿಎಸ್​ ಮತ್ತು ಐಎಫ್​ಎಸ್​​ ಹುದ್ದೆ : ಕೇಂದ್ರ ಸರ್ಕಾರ ಮಾಹಿತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಖಾಲಿ ಇರುವ ಐಎಎಸ್​, ಐಪಿಎಸ್​ ಮತ್ತು ಐಎಫ್​ಎಸ್​​ ಹುದ್ದೆಗಳ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದೆ. ದೇಶದ ಆಡಳಿತಕ್ಕೆ ಪ್ರಮುಖವಾಗಿ ಬೇಕಾಗಿರುವ ಐಎಎಸ್​, ಐಪಿಎಸ್​ ಹುದ್ದೆಗಳು ಖಾಲಿ ಇರುವ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಗುರುವಾರ ಮಾಹಿತಿ ಹಂಚಿಕೊಂಡಿದೆ. ಇದರಂತೆ, ದೇಶದಲ್ಲಿ ಸದ್ಯ 1316 ಐಎಎಸ್​​, 586 ಐಪಿಎಸ್​ ಹುದ್ದೆಗಳು ಇನ್ನೂ ಭರ್ತಿಯಾಗಬೇಕಿದೆ ಎಂದು ತಿಳಿಸಿದೆ.

ಕೇಂದ್ರದ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್​ ಅವರು ರಾಜ್ಯಸಭೆಗೆ ಲಿಖಿತ ಮಾಹಿತಿ ನೀಡಿದ್ದು, ದೇಶದಲ್ಲಿ ಭಾರತೀಯ ಆಡಳಿತ ಸೇವೆಯ (ಐಎಎಸ್) 6,858 ಹುದ್ದೆಗಳ ಪೈಕಿ 5542 ಭರ್ತಿ ಮಾಡಲಾಗಿದೆ. ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) 5,055 ಹುದ್ದೆಗಳಲ್ಲಿ 4,469 ತುಂಬಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಖಾಲಿ ಇರುವ 1,316 ಐಎಎಸ್ ಹುದ್ದೆಗಳ ಪೈಕಿ 794 ನೇರ ನೇಮಕಾತಿ ಮತ್ತು 522 ಪದೋನ್ನತಿ ಮೂಲಕ ತುಂಬಬೇಕಿದೆ. ಖಾಲಿ ಇರುವ 586 ಐಪಿಎಸ್ ಹುದ್ದೆಗಳಲ್ಲಿ 209 ನೇರ ನೇಮಕಾತಿ ಮತ್ತು 377 ಬಡ್ತಿ ಮೂಲಕ ಭರ್ತಿ ಮಾಡಬೇಕಿದೆ ಎಂದು ಸಚಿವರು ಹೇಳಿದ್ದಾರೆ.

ಸರ್ಕಾರ ನೀಡಿದ ವಿವರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಮೀಸಲಾತಿ ಅನ್ವಯ ಮಾಡಿದ ಭರ್ತಿ ಬಗ್ಗೆಯೂ ಮಾಹಿತಿ ಇದೆ. 2022ರ ನಾಗರಿಕ ಸೇವಾ ಪರೀಕ್ಷೆಯ (CSE) ವೇಳೆ ಐಎಎಸ್​ ಹುದ್ದೆಗೆ 75 ಸಾಮಾನ್ಯ, 45 ಒಬಿಸಿ, 29 ಎಸ್​ಸಿ ಮತ್ತು 13 ಎಸ್​​ಟಿ ಮೀಸಲಾತಿ ನೀಡಲಾಗಿದೆ.

ಅದೇ ಅವಧಿಯಲ್ಲಿ ಐಪಿಎಸ್‌ನಲ್ಲಿ 83 ಸಾಮಾನ್ಯ, 53 ಒಬಿಸಿ, 31 ಎಸ್‌ಸಿ ಮತ್ತು 13 ಎಸ್‌ಟಿ ನೇಮಕಾತಿ ನಡೆದಿದೆ. ಐಎಫ್‌ಎಸ್‌ನಲ್ಲಿ ಒಟ್ಟು 43 ಸಾಮಾನ್ಯ, 51 ಒಬಿಸಿ, 22 ಎಸ್‌ಸಿ ಮತ್ತು 11 ಎಸ್‌ಟಿ ನೇಮಕಾತಿಗಳನ್ನು ಮಾಡಲಾಗಿದೆ ಎಂದಿದೆ.

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ)ವು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಪ್ರತಿ ವರ್ಷ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಸುತ್ತದೆ.

ಭಾರತೀಯ ಅರಣ್ಯ ಸೇವೆ (IFS) 3,193 ಹುದ್ದೆಗಳ ಪೈಕಿ 2,151 ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಈ ಇಲಾಖೆಯಲ್ಲಿ ಸದ್ಯ 1,042 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 503 ನೇರ ನೇಮಕಾತಿ ಮತ್ತು 539 ಪದೋನ್ನತಿ ಮೂಲಕ ಭರ್ತಿ ಮಾಡಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

C T RAVI ARREST ISSUE – ಸಿ.ಟಿ ರವಿ ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಪೊಲೀಸರಿಗೆ ಇತ್ತಾ?

Hubli News: "ತರಾತುರಿಯಲ್ಲಿ ಸಿ. ಟಿ. ರವಿ‌ ವಿರುದ್ಧ ಎಫ್​ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್​ಗೆ. ಬೆಳಗಾವಿ ಕಮಿಷನರ್ ಅನ್​ಫಿಟ್ ಇದ್ದಾರೆ" ಎಂದು...

PM MODI TO ATTEND CHRISTMAS – ಪ್ರಧಾನಿ ಮೋದಿ ನಾಳೆ ಕ್ರಿಸ್ಮಸ್ ಆಚರಣೆಯಲ್ಲಿ ಭಾಗಿ

New Delhi News: ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್​ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...

BANDIPUR FOREST – ಬಂಡೀಪುರ ರಾತ್ರಿ ಸಂಚಾರ ನಿಷೇಧ ಸಮಸ್ಯೆ

BANDIPUR NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (BTR) ಮೂಲಕ ಹಾದು ಹೋಗುವ 24.7 ಕಿ.ಮೀ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಸಂಬಂಧಿಸಿದ ಸಮಸ್ಯೆಗಳು...

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...