spot_img
spot_img

IHOLE BUILDING : ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ ಬ್ಲಾಕ್

spot_img
spot_img

Share post:

Tirumala/Bangalore News:

ಆಂಧ್ರಪ್ರದೇಶದ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ತೆರಳುವ ಕರ್ನಾಟಕದ ಭಕ್ತರಿಗೆ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ತಿರುಪತಿಯಲ್ಲಿ 132 ಕೊಠಡಿಗಳ ಕಟ್ಟಡ ಲೋಕಾರ್ಪಣೆ ಮಾಡಲಾಗಿದೆ.ಈಗಾಗಲೇ 110 AC ಕೊಠಡಿಗಳ BUILDING -2 ( ಹಂಪಿ BUILDING) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ BUILDING ಕಟ್ಟಡವನ್ನು ಮಂಗಳವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಸರ್ಕಾರ ತಿರುಮಲಕ್ಕೆ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350/- (+GST) ನಿಗದಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.

ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು ಶ್ರೀ ಕೃಷ್ಣದೇವರಾಯ BUILDING ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ BUILDING ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ.ತಿರುಪತಿ ಹಾಗೂ ತಿರುಚಾನೂರಿನಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.ಕಲ್ಯಾಣ ಮಂಟಪ BUILDING ಹಾಗೂ ವಿವಿಐಪಿ ಕೊಠಡಿಗಳ BUILDING 2025ರ ಏಪ್ರಿಲ್ ಅಥವಾ ಮೇ ಮಾಹೆಯಲ್ಲಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಸದರಿ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಸಿಎಂ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನೆರವೇರಿಸಲಾಗುವುದು.

ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್​ಸೈಟ್ Karnatakatemplesaccommodation.com ಮೂಲಕ ಶೇ.60% ರಷ್ಟು Online ಮೂಲಕ ಹಾಗೂ ಶೇ.40% Offline ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ.

ಇದನ್ನು ಓದಿರಿ : TIRUPATI ANNAPRASADA MENU : ತಿರುಪತಿ ಅನ್ನಪ್ರಸಾದದಲ್ಲಿ ಮಸಾಲೆ ವಡೆ ಸೇರ್ಪಡೆ

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...