spot_img
spot_img

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

spot_img
spot_img

Share post:

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಚಿಕಿತ್ಸೆಗಾಗಿ ಬಡವರಿಗೆ ಬೆಲೆ ಏರಿಕೆ ಬರೆಯನ್ನು ಹಾಕುತ್ತಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

” ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ.

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ARS ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ ಎಂದು ಸಚಿವರು ಸ್ಪಷ್ಟನೆಯನ್ನು ನೀಡಿದರು.

ಆಸ್ಪತ್ರೆಯ ARS fund ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.

ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಶೇ 15 ರಿಂದ 20 ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ.

ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಕೆ.ಸಿ.ಜನರಲ್ ಹೊರತಾಗಿ ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ.

ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...