spot_img
spot_img

Inauguration of Krantiveer Brigade : 2025ರ ಫೆಬ್ರವರಿ 4ರಂದು ಬಸವನಬಾಗೇವಾಡಿಯಲ್ಲಿ

spot_img
spot_img

Share post:

Krantiveer Brigade in Hubli

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “1008 ಮಂದಿ ಸಾಧು ಸಂತರ ಪಾದ ಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ. “2025ರ ಫೆಬ್ರವರಿ 4ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್​ಗೆ ಚಾಲನೆ ನೀಡಲಾಗುತ್ತದೆ” ಎಂದು ಮಕಣಾಪುರ ಮಠದ ಸೋಮೇಶ್ವರ ಸ್ವಾಮೀಜಿ ತಿಳಿಸಿದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ನಮಗೆ ಮಾರ್ಗದರ್ಶನ ಮಾಡಲಿದ್ದಾರೆ” ಎಂದು ಹೇಳಿದರು. ವಕ್ಫ್​ ವಿಚಾರವಾಗಿ ಡಿಸೆಂಬರ್​ 20ರಂದು ಕಲಬುರಗಿ ಬಂದ್​ಗೆ ಕರೆ ಕೊಟ್ಟಿದ್ದೇವೆ. ನಮಗೆ ಈಶ್ವರಪ್ಪ ಬೆನ್ನೆಲುಬಾಗಿ ನಿಂತಿದ್ದಾರೆ. ನಮ್ಮ ಸಂಘಟನೆಗೆ ರಾಜಕೀಯ ಉದ್ದೇಶವಿಲ್ಲ.

ಯಾವ ಪಕ್ಷದವರು ಬಂದರೂ ಸ್ವಾಗತಿಸುತ್ತೇವೆ. ವಕ್ಫ್ ಅನ್ನೋದು ದೆವ್ವ ಇದ್ದ ಹಾಗೆ. ದೆವ್ವ ನಮ್ಮ ಮುಂದೆ ಬಂದು ನಿಂತಿದೆ ಎಂದರು. ವಕ್ಫ್​ ವಿಚಾರದಿಂದಾಗಿ ಜನರು ಹೆದರಿದ್ದಾರೆ. ಹುಲಿ ಬಂದಾಗ, ಸಿಂಹ ಬಂದಾಗ ಜನರು ಹೇಗೆ ಹೆದರುತ್ತಾರೋ, ಹಾಗೇ ವಕ್ಫ್​ ಹೆಸರು ಬಂದಾಗ ಮಠಾಧೀಶರು ಕೂಡ ಹೆದರಿದ್ದಾರೆ.

ಹಿಂದೂ ಧರ್ಮ, ಮಠ ಮಂದಿರ ರಕ್ಷಣೆಗೆ ಕ್ರಾಂತಿವೀರ ಬ್ರಿಗೇಡ್ ಸ್ಥಾಪಿಸಲಾಗಿದೆ.  ರಾಜ್ಯದಲ್ಲಿರುವ ಸಣ್ಣ ಸಣ್ಣ ಮಠಗಳು ತಾತ್ಸಾರಕ್ಕೊಳಗಾಗಿವೆ. ಡಿ.ವಿ.ಸದಾನಂದ ಗೌಡ ಮತ್ತು ಬಸವರಾಜ್​ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಮಠಗಳಿಗೆ ಹಣ ಬಿಡುಗಡೆ ಮಾಡಿದ್ದರು ಎಂದು ತಿಳಿಸಿದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, “ಸೋಮೇಶ್ವರ ಸ್ವಾಮೀಜಿ ಹೇಳಿದಂತೆ ಫೆಬ್ರವರಿ 4ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್​ಗೆ ಚಾಲನೆ ನೀಡಲಾಗುತ್ತದೆ.

Neither for nor against reservation:

“ಕರ್ನಾಟಕದಲ್ಲಿ ಸಾವಿರಾರು ಸಣ್ಣ ಮಠಗಳಿವೆ. ಕ್ರಾಂತವೀರ ಬ್ರಿಗೇಡ್​​ನಿಂದ ಸಣ್ಣ ಮಠಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ. ಹಿಂದೂ ಧರ್ಮದ ರಕ್ಷಣೆಗೆ ನಮ್ಮ ಹೋರಾಟ. ಮಠಾಧೀಶರು ಬ್ರಿಗೇಡ್ ಆರಂಭ ಮಾಡತ್ತಿದ್ದಾರೆ.

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡಿದಾಗ ಕೆಲವರು ಹೈಕಮಾಂಡ್​ ನಾಯಕರಿಗೆ ದೂರು ಕೊಟ್ಟರು. ಕೆಲವರು ರಾಣಿ ಚೆನ್ನಮ್ಮ ಬ್ರಿಗೇಡ್ ಎಂದು ಹೇಳಿದರು. ಮೀಸಲಾತಿ ವಿಚಾರವಾಗಿ ನಾವು ಮಾತನಾಡಲ್ಲ. ನಾನು ಮೀಸಲಾತಿ ಪರವೂ ಅಲ್ಲ, ವಿರೋಧವೂ ಅಲ್ಲ.

ಹಿಂದೂ ಧರ್ಮದ ರಕ್ಷಣೆಗೆ ನಮ್ಮ ಹೋರಾಟ” ಎಂದು ಸ್ಪಷ್ಟಪಡಿಸಿದರು. “ಬಿಜೆಪಿ‌ ನನಗೆ ತಾಯಿ ಇದ್ದಂತೆ. ತಾಯಿ ನನಗೆ ಅನ್ಯಾಯ ಮಾಡಿಲ್ಲ. ಯಾರೋ ಕೆಲ ದ್ರೋಹಿಗಳು ಅನ್ಯಾಯ ಮಾಡಿದ್ದಾರೆ. ತಾಯಿಗೆ ಮಗನ ಮೇಲೆ ಪ್ರೀತಿ ಇದೆ. ಮಗನಿಗೂ ತಾಯಿ ಮೇಲೆ ಪ್ರೀತಿ ಇದೆ. ಕೆಲ ದ್ರೋಹಿಗಳು ಹೀಗೆ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...