ಬೆಂಗಳೂರು : ಮೈತ್ರಿ ಯೋಜನೆಯಡಿ ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಾಶನ ಹೆಚ್ಚಳ ಮಾಡಲಾಗುವುದು ಹಾಗೂ ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಜಿ ದೇವದಾಸಿಯರ ಮಾಸಾಶನ 1,500 ರೂ.ನಿಂದ 2000 ರೂ. ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1,200 ರೂ. ಗಳವರೆಗೆ ಹೆಚ್ಚಳ ಮಾಡವ ಯೋಜನೆ ಹೊರಡಿಸಿದ್ದಾರೆ.
ಅಲ್ಪಸಂಖ್ಯಾತ ಮಹಿಳೆಯರಿಗೆ ಆರ್ಥಿಕ ಉತ್ತೇಜನ, ಮಹಿಳಾ ಸ್ವಸಹಾಯ ಗುಂಪುಗಳಿಗೆ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
1,500 ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ.
ವಕ್ಫ್ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ರೂ. ಮೀಸಲು, 100 ಮೌಲಾನಾ ಅಜಾದ್ ವಸತಿ ಶಾಲೆಗಳ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ಯಾಚ್ಯುವಿಟಿ ಸೌಲಭ್ಯ ನೀಡಲಾಗುವುದು ಎಂಬ ಆಶ್ವಾಸನೆ ನೀಡಿದ್ದಾರೆ.
ಅಂಗವಾಡಿ ಕಟ್ಟಡಬಳ ಅಭಿವೃದ್ಧಿಗೆ 300 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.