spot_img
spot_img

ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ : ಸಚಿವ ದಿನೇಶ್ ಗುಂಡೂರಾವ್

spot_img
spot_img

Share post:

ಮಂಗಳೂರು: ಆರೋಗ್ಯ ಇಲಾಖೆಯು ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಆಸ್ಪತ್ರೆಗಳ ಅಭಿವೃದ್ಧಿ ಮತ್ತು ಜನರಿಗೆ ಹೊರೆಯಾಗದಂತೆ ಹೆಚ್ಚಳ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕವನ್ನು ಬಹಳ ವರ್ಷಗಳ ನಂತರ ಹೆಚ್ಚಿಸಲಾಗಿದೆ. ಜನರಿಗೆ ಹೊರೆಯಾಗದಂತೆ ಅಲ್ಪ ಪ್ರಮಾಣದಲ್ಲಿ ಸೇವಾ ಶುಲ್ಕ ಪರಿಷ್ಕರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಮಾಧ್ಯಮಗಳಿಗೆ ಸೇವಾ ಶುಲ್ಕ ಹೆಚ್ಚಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆ. ಸೇವಾ ಶುಲ್ಕ ಆಸ್ಪತ್ರೆ ಸಮಿತಿಗೆ ಹೋಗುತ್ತದೆ. ಸ್ಥಳೀಯ ಶಾಸಕರೇ ಆ ಸಮಿತಿ ಅಧ್ಯಕ್ಷರಾಗಿದ್ದು, ಆ ಹಣವನ್ನು ಆಸ್ಪತ್ರೆಗೆ ಬಳಸಿಕೊಳ್ಳಲಾಗುತ್ತದೆ ಎಂದರು.

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ARS ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ. ಆಸ್ಪತ್ರೆಯ ARS Fund ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ತಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ ಎಂದರು.

ರಾಜ್ಯದಲ್ಲಿ ಪಡಿತರ ಚೀಟಿ ರದ್ದು ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು ಕೆಲವು ಕಡೆ ಬಡತನ ರೇಖೆಗಿಂತ ಕಡಿಮೆ ಇರುವ ಶೇ.80/90 ಪರ್ಸೆಂಟ್ ರದ್ದಾಗಿರುವ ಬಗ್ಗೆ ಆರೋಪ‌ ಮಾಡಲಾಗುತ್ತಿದೆ. ಆದರೆ ವೈಜ್ಞಾನಿಕವಾಗಿ‌ ನೋಡಿದಾಗ ಅದು ಸಾಧ್ಯವಿಲ್ಲ. ಅನರ್ಹ ಕಾರ್ಡು‌ಗಳನ್ನು ರದ್ದು ಪಡಿಸಲಾಗಿದೆ.

ಆದಾಯ ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಸೇರಿದಂತೆ ಇತರ ಮಾನದಂಡ ಆದರಿಸಿ ಕಾರ್ಡ್ ರದ್ದು ಪಡಿಸಲಾಗಿದೆ ಅಂತ ಸಿಎಂ ಸ್ಪಷ್ಟ ಪಡಿಸಿದ್ದಾರೆ. ಕೆಲವು ತಪ್ಪು ಆಗಿದೆ ಅದನ್ನು ಸರಿಸಡಿಸುತ್ತೇವೆ. ತಪ್ಪಾಗಿರೋದು ಸರಿಪಡಿಸಲೇ ಬಾರದು ಅನ್ನೋದು ಯಾವ ಲಾಜಿಕ್. ಕೇಂದ್ರ ಸರ್ಕಾರ 5.80 ಕೋಟಿ ಪಡಿತರ ಚೀಟಿ ರದ್ದಾಗಿರುವ ಬಗ್ಗೆ ಮಾಹಿತಿ ನೀಡಿದೆ.

ಈ ವಿಚಾರ ಯಾಕೆ ಬಿಜೆಪಿ ಮಾತಾಡುತ್ತಿಲ್ಲ ? ಸರ್ಕಾರದ ಹಣ ಅರ್ಹ ಫಲಾನುಭವಿಗಳಿಗೆ ಮುಟ್ಟಬೇಕು. ಗೃಹ ಲಕ್ಷ್ಮಿ ಯೋಜನೆಗೂ ಪಡಿತರಕ್ಕೂ ಯಾವುದೇ ಸಂಬಂಧ ಇಲ್ಲ. ಕೆಲವು ಪಡಿತರ ರದ್ದು ವಿಚಾರದಲ್ಲಿ ಸಣ್ಣ ಪುಟ್ಟ ಸಮಸ್ಯೆ ಆಗಿದೆ. ಅದನ್ನು ಸರ್ಕಾರ ಸರಿ ಮಾಡುತ್ತೆ. ವ್ಯವಸ್ಥೆ ಸುಧಾರಣೆ ಮಾಡುವಾಗ ಸ್ಪಲ್ಪ ಸಮಸ್ಯೆ ಬರುತ್ತೆ, ಅದನ್ನು ಸರಿ ಪಡಿಸುತ್ತೇವೆ ಎಂದರು.

ನಬಾರ್ಡ್ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ನಬಾರ್ಡ್‌ನಲ್ಲಿ 2500 ಕೋಟಿ ಕಡಿತವಾಗಿದೆ. ಇದು ಪ್ರಮುಖ ವಿಚಾರ. ಪ್ರಲ್ಹಾದ್ ಜೋಶಿ ಇದರ ಬಗ್ಗೆ ಮಾತಾಡಲಿ. ಕೇಂದ್ರ ಸಚಿವರ ಜೊತೆ ಮಾತಾಡುತ್ತೇನೆ ಅಂತ ಹೇಳಲು ಅವರಿಗೆ ಬಾಯಿ ಬರುದಿಲ್ಲ. ಕೇಂದ್ರಕ್ಕೆ ಬಿಜೆಪಿಯವರು ಗುಲಾಮರಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...