spot_img
spot_img

IND vs AUS: PINK BALL ಟೆಸ್ಟ್ ಮ್ಯಾಚ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Border Gavaskar Trophy:

ಭಾರತ ಮತ್ತು ಆಸೀಸ್ Border Gavaskar Trophy ಮತ್ತೆ ರಂಗೇರಲಿದೆ! ಏನು ಸುದ್ದಿ ಮತ್ತು ಟೀಮ್ ಇಂಡಿಯಾ ದಲ್ಲಿ ಯಾರ್ ಯಾರು ಇದ್ದಾರೆ ಎಂದು ನೀವೇ ಓದಿರಿ:

IND vs AUS, Border Gavaskar Trophy:

IND vs AUS
IND vs AUS

ಈ ವರ್ಷದ ನವೆಂಬರ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿದೆ. ಸುಮಾರು 2 ತಿಂಗಳ ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಇತಿಹಾಸದಲ್ಲಿ ಮೊದಲ ಬಾರಿಗೆ ಉಭಯ ತಂಡಗಳ ನಡುವೆ 5 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಡೇ ನೈಟ್ ಟೆಸ್ಟ್ ಪಂದ್ಯವೂ ಸೇರಿದೆ.
2020-21ರ ಆಸ್ಟ್ರೇಲಿಯಾ ಪ್ರವಾಸದ ನಂತರ ಟೀಂ ಇಂಡಿಯಾ ಮೊದಲ ಬಾರಿಗೆ ಟೆಸ್ಟ್ ಸರಣಿಗಾಗಿ ಆಸೀಸ್ ಪ್ರವಾಸ ಮಾಡಲಿದೆ. ಆದರೆ ಕಳೆದ ಪ್ರವಾಸದಲ್ಲಿ ನಡೆದಿದ್ದ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಭಾರತ ತಂಡದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಅಡಿಲೇಡ್‌ನಲ್ಲಿ ನಡೆದ ಆ ಹಗಲು-ರಾತ್ರಿ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಇಡೀ ಭಾರತ ತಂಡ ಕೇವಲ 36 ರನ್​ಗಳಿಗೆ ಆಲೌಟ್ ಆಗಿತ್ತು.

PINK BALL TEST MATCH IND vs AUS:

ಈ ಹಗಲು- ರಾತ್ರಿ ಪಂದ್ಯವು ಅಡಿಲೇಡ್ ಓವಲ್‌ ಮೈದಾನದಲ್ಲಿ ಡಿಸೆಂಬರ್ 6 ರಿಂದ 10 ರ ನಡುವೆ ನಡೆಯಲಿದೆ. ಈ ಹಿಂದೆ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಹಗಲು-ರಾತ್ರಿ ಟೆಸ್ಟ್‌ ಪಂದ್ಯವನ್ನಾಡಿದ್ದಾಗ ಹೀನಾಯ ಪ್ರದರ್ಶನ ನೀಡಿತ್ತು. ಹೀಗಾಗಿ ಮತ್ತೊಮ್ಮೆ ಆ ಮುಜುಗರವನ್ನು ತಡೆಯುವ ಸಲುವಾಗಿ ಟೀಂ ಇಂಡಿಯಾ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ

>ಮೊದಲ ಟೆಸ್ಟ್: 22-26 ನವೆಂಬರ್, ಪರ್ತ್
>ಎರಡನೇ ಟೆಸ್ಟ್: 6-10 ಡಿಸೆಂಬರ್, ಅಡಿಲೇಡ್ (ಹಗಲು/ರಾತ್ರಿ)
>ಮೂರನೇ ಟೆಸ್ಟ್: 14-18 ಡಿಸೆಂಬರ್, ಬ್ರಿಸ್ಬೇನ್
>ನಾಲ್ಕನೇ ಟೆಸ್ಟ್: 26-30 ಡಿಸೆಂಬರ್, ಮೆಲ್ಬೋರ್ನ್
>ಐದನೇ ಟೆಸ್ಟ್: 3-7 ಜನವರಿ, ಸಿಡ್ನಿ

IND vs AUS: PINK BALL TEST MATCH ಪ್ರದರ್ಶನ

ಟೀಂ ಇಂಡಿಯಾ ಇದುವರೆಗೆ ಕೇವಲ 4 ಹಗಲು-ರಾತ್ರಿ ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಅವಧಿಯಲ್ಲಿ ಭಾರತದಲ್ಲಿ 3 ಹಗಲು-ರಾತ್ರಿ ಟೆಸ್ಟ್ ಪಂದ್ಯಗಳು ನಡೆದಿದ್ದು, ಈ ಎಲ್ಲ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಅದೇ ಸಮಯದಲ್ಲಿ, ಟೀಂ ಇಂಡಿಯಾ ಭಾರತದ ಹೊರಗೆ ಕೇವಲ ಒಂದು ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿದೆ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಆ ಟೆಸ್ಟ್ ಪಂದ್ಯದಲ್ಲಿ ಭಾರತ ಸೋತಿತ್ತು. ಮತ್ತೊಂದೆಡೆ, ಆಸ್ಟ್ರೇಲಿಯಾ ಇದುವರೆಗೆ 12 ಹಗಲು ರಾತ್ರಿ ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 11 ಪಂದ್ಯಗಳನ್ನು ಗೆದ್ದಿದ್ದರೆ, 1 ಪಂದ್ಯದಲ್ಲಿ ಸೋತಿದೆ.

ಟೀಂ ಇಂಡಿಯಾದ ವಿಶೇಷ ಯೋಜನೆ

ಈ ಬಾರಿ ಆಸ್ಟ್ರೇಲಿಯಾದಲ್ಲಿ ಇಂತಹ ಪ್ರಮಾದ ತಪ್ಪಿಸಲು ಟೀಂ ಇಂಡಿಯಾ ಪಿಂಕ್ ಬಾಲ್ ಟೆಸ್ಟ್​ಗೂ ಮುನ್ನ ಎರಡು ದಿನಗಳ ಹಗಲು-ರಾತ್ರಿ ಅಭ್ಯಾಸ ಪಂದ್ಯ ಆಡಲು ನಿರ್ಧರಿಸಿದೆ. ಅದರಂತೆ ನವೆಂಬರ್ 30 ಮತ್ತು ಡಿಸೆಂಬರ್ 1 ರ ನಡುವೆ ಕ್ಯಾನ್‌ಬೆರಾದಲ್ಲಿ ಹಗಲು-ರಾತ್ರಿ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪ್ರೈಂ ಮಿನಿಸ್ಟರ್ 11 ತಂಡದ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ. ಕಳೆದ 2 ವರ್ಷಗಳಿಂದ ಟೀಂ ಇಂಡಿಯಾ ಯಾವುದೇ ಡೇ-ನೈಟ್ ಟೆಸ್ಟ್ ಆಡಿಲ್ಲ. ಹಾಗಾಗಿ ಈ ಅಭ್ಯಾಸ ಪಂದ್ಯ ಭಾರತೀಯ ಆಟಗಾರರ ಸಿದ್ಧತೆಗೆ ಬಹಳ ಮಹತ್ವದ್ದಾಗಿದೆ. 2020-21ರ ಆಸ್ಟ್ರೇಲಿಯಾ ಪ್ರವಾಸದ ನಂತರ ಟೀಂ ಇಂಡಿಯಾ ಮೊದಲ ಬಾರಿಗೆ ಟೆಸ್ಟ್ ಸರಣಿಗಾಗಿ ಆಸೀಸ್ ಪ್ರವಾಸ ಮಾಡಲಿದೆ. ಆದರೆ ಕಳೆದ ಪ್ರವಾಸದಲ್ಲಿ ನಡೆದಿದ್ದ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಭಾರತ ತಂಡದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಅಡಿಲೇಡ್‌ನಲ್ಲಿ ನಡೆದ ಆ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 244 ರನ್ ಗಳಿಸಿ ಪಂದ್ಯಕ್ಕೆ ಶುಭಾರಂಭ ನೀಡಿತ್ತು. ಆ ಬಳಿಕ ಭಾರತದ ಬೌಲರ್‌ಗಳು ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 191 ರನ್‌ಗಳಿಗೆ ಕಟ್ಟಿ ಹಾಕಿ ಪಂದ್ಯ ಗೆಲ್ಲುವ ಸುಳಿವು ನೀಡಿದ್ದರು. ಆದರೆ ಎರಡನೇ ಇನಿಂಗ್ಸ್​ನಲ್ಲಿ ಇಡೀ ಭಾರತ ತಂಡ 21.2 ಓವರ್​ಗಳಲ್ಲಿ ಕೇವಲ 36 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಅಂದರೆ ಇಡೀ ತಂಡ ಕೇವಲ 36 ರನ್​ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಗೆಲುವಿನ ಫೇವರೇಟ್ ಎನಿಸಿಕೊಂಡಿದ್ದ ಭಾರತ ತಂಡ ಆ ಟೆಸ್ಟ್‌ನಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು.

ಇನ್ನಷ್ಟು ಓದಿರಿ:

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...