spot_img
spot_img

IND VS ENG 3RD ODI : ಇಂಗ್ಲೆಂಡ್ ವಿರುದ್ಧ 44 ವರ್ಷದ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜು

spot_img
spot_img

Share post:

IND vs ENG, 3rd ODI:

IND VS ENG 3RD ODI ನಾಳೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 2 ಪಂದ್ಯಗಳನ್ನು ಗೆದ್ದುಕೊಂಡಿದ್ದು 1 ಪಂದ್ಯಕ್ಕೂ ಮೊದಲೇ ಸರಣಿ ಕೈವಶಪಡಿಸಿಕೊಂಡಿದೆ. ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕದ ನೆರವಿನಿಂದ ಭಾರತ ಆಂಗ್ಲರನ್ನು 4 ವಿಕೆಟ್‌ಗಳಿಂದ ಸೋಲಿಸಿದೆ. ಇದೀಗ ಮೂರನೇ ಪಂದ್ಯವನ್ನೂ ಗೆದ್ದು ಇಂಗ್ಲೆಂಡ್​ ವಿರುದ್ಧ ಹಳೆಯ ಸೇಡು ತೀರಿಸಿಕೊಳ್ಳಲು ರೋಹಿತ್​ ಪಡೆ ತವಕಿಸುತ್ತಿದೆ.

Modi Maidan Record:

IND VS ENG 3RD ODI ಈ ಮೈದಾನದಲ್ಲಿ ಎರಡೂ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಿವೆ. ಇಲ್ಲಿ ಭಾರತ 20 ಏಕದಿನ ಪಂದ್ಯಗಳನ್ನು ಆಡಿದ್ದು ಅದರಲ್ಲಿ 11 ಪಂದ್ಯಗಳನ್ನು ಗೆದ್ದು 9 ಪಂದ್ಯಗಳಲ್ಲಿ ಸೋತಿದೆ. ಇಂಗ್ಲೆಂಡ್ 4 ಪಂದ್ಯಗಳನ್ನು ಆಡಿದ್ದು, ಕೇವಲ ಒಂದು ಪಂದ್ಯ ಗೆದ್ದು ಮೂರು ಪಂದ್ಯಗಳಲ್ಲಿ ಸೋತಿದೆ. ಉಭಯ ತಂಡಗಳು ಈವರೆಗೆ ಒಟ್ಟು 108 ಏಕದಿನ ಪಂದ್ಯಗಳನ್ನಾಡಿವೆ. ಇವುಗಳಲ್ಲಿ ಭಾರತ 58 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ಇಂಗ್ಲೆಂಡ್ 44 ಬಾರಿ ಗೆಲುವು ಸಾಧಿಸಿದೆ. ಉಳಿದಂತೆ 3 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡು, 2 ಪಂದ್ಯ ರದ್ದಾಗಿವೆ.

 Which is an old revenge?:

ಹಿಂದೆ ಮೊಟೆರಾ ಎಂದು ಕರೆಯಲಾಗುತ್ತಿದ್ದ ಈ ಮೈದಾನದಲ್ಲಿ 1981ರಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆದಿತ್ತು. ಇಂಗ್ಲೆಂಡ್ 5 ವಿಕೆಟ್‌ಗಳಿಂದ ಜಯಗಳಿಸಿತ್ತು. ಇದೀಗ ಆಂಗ್ಲರ ವಿರುದ್ಧ ಗೆದ್ದು 44 ವರ್ಷದ ಹಳೆಯ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ.

Possible Teams- India:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್/ ರಿಷಭ್ ಪಂತ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷ್‌ದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.

England:

ಜೋಸ್ ಬಟ್ಲರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್​ ಕೀಪರ್​), ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಶಾಕಿಬ್ ಮಹಮೂದ್

ಇದನ್ನು ಓದಿರಿ : PM Modi Meets Pichai In France, Discusses ‘India’s Digital Transformation’

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...