IND vs ENG, 2nd ODI:
IND VS ENG ODI SERIES ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕಾಗಿ ಭಾರತ ತಂಡಕ್ಕೆ ಸ್ಟಾರ್ ಪ್ಲೇಯರ್ ಕಮ್ಬ್ಯಾಕ್ ಮಾಡಲಿದ್ದಾರೆ. ಎರಡನೇ ಪಂದ್ಯದಲ್ಲೂ ಇದೆ ಆಟವನ್ನು ಮುಂದುವರೆಸಿ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ವಶಪಡಿಸಿಕೊಳ್ಳಲು ಟೀಂ ಇಂಡಿಯಾ ಸಂಕಲ್ಪ ತೊಟ್ಟಿದೆ.
ಮತ್ತೊಂದೆಡೆ, ಮೊದಲ ಪಂದ್ಯದಲ್ಲಿ ಆದ ತಪ್ಪುಗಳನ್ನು ತಿದ್ದಿಕೊಂಡು ಎರಡನೇ ಮ್ಯಾಚ್ನಲ್ಲಿ ಗೆಲುವು ಸಾಧಿಸಲು ಆಂಗ್ಲ ಪಡೆ ಸಿದ್ಧತೆ ನಡೆಸುತ್ತಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ತಂಡಗಳು 3 ಪಂದ್ಯಗಳ ಏಕದಿನ ಸರಣಿ ಆಡುತ್ತಿವೆ.
ಗುರುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿರುವ ಭಾರತ 4 ವಿಕೆಟ್ಗಳಿಂದ ಆಂಗ್ಲರನ್ನು ಬಗ್ಗು ಬಡೆದಿದೆ. ಇದರೊಂದಿಗೆ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
Coke for Jaiswal or Iyer:
ಉಭಯ ತಂಡಗಳ ನಡುವಿನ ಈ ಪಂದ್ಯ ಕಟಕ್ನ ಬಾರಾಬತಿ ಮೈದಾನದಲ್ಲಿ ನಡೆಯಲಿದೆ. ಆದರೆ ಎರಡನೇ ಪಂದ್ಯದಲ್ಲಿ ಕೆಲ ಬದಲಾವಣೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.
IND VS ENG ODI SERIES ಮೊದಲ ಪಂದ್ಯವನ್ನು ಆಡಿರುವ ಯಶಸ್ವಿ ಜೈಸ್ವಾಲ್ ಅಥವಾ ಶ್ರೇಯಸ್ ಅಯ್ಯರ್ ಇಬರಲ್ಲಿ ಒಬ್ಬರಿಗೆ ಕೋಕ್ ನೀಡುವ ಸಾಧ್ಯತೆ ಇದೆ. ಏಕೆಂದರೆ ಗಾಯದಿಂದಾಗಿ ಮೊದಲ ಪಂದ್ಯ ತಪ್ಪಿಸಿಕೊಂಡಿದ್ದ ವಿರಾಟ್ ಕೊಹ್ಲಿ ಎರಡನೇ ಪಂದ್ಯ ಆಡಲು ಸಜ್ಜಾಗಿದ್ದಾರೆ.
Kohli comeback after 5 months:
ಭಾರತದ ಸ್ಟಾರ್ ಬ್ಯಾಟರ್ ಆಗಿರುವ ವಿರಾಟ್ ಕೊಹ್ಲಿ 5 ತಿಂಗಳ ಬಳಿಕ ಏಕದಿನ ಪಂದ್ಯಕ್ಕೆ ಮರಳಲಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಇದರ ಬಳಿಕ ಭಾರತ ಏಕದಿನ ಪಂದ್ಯಗಳನ್ನು ಆಡಿರಲಿಲ್ಲ.
Virat on the brink of a world record:
ಇದಕ್ಕೂ ಮೊದಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾದ ಸಂಗಕ್ಕಾರ ಈ ಸಾಧನೆ ಮಾಡಿದ್ದಾರೆ. ತೆಂಡೂಲ್ಕರ್ ಈ 350 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದರೇ, ಸಂಗಕ್ಕಾರ 378 ಇನ್ನಿಂಗ್ಸ್ ತೆಗದುಕೊಂಡಿದ್ದಾರೆ. ಆದರೆ ಕೊಹ್ಲಿ 283 ಇನ್ನಿಂಗ್ಸ್ಗಳಲ್ಲೆ 13,906 ರನ್ ಕಲೆಹಾಕಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೂ 94ರನ್ ಗಳಿಸಿದರೆ ಏಕದಿನ ಕ್ರಿಕೆಟ್ನಲ್ಲಿ 14000 ರನ್ ಪೂರ್ಣಗೊಳಿಸಲಿದ್ದಾರೆ. ಇದರೊಂದಿಗೆ ಕಡಿಮೆ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಒಟ್ಟಾರೆ ಮೂರನೇ ಬ್ಯಾಟರ್ ಆಗಲಿದ್ದಾರೆ.
Potential team:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೆಲ್, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ/ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್/ ವರುಣ್ಚಕ್ರವರ್ತಿ.
ಇದನ್ನು ಓದಿರಿ : US Judge Temporarily Blocks Trump From Placing Thousands Of USAID Workers On Paid Leave