Ind vs Ban:
ಇಂದು ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡ ಕಣಕ್ಕಿಳಿಯಲಿದೆ. INDIA VS BANGLADESH MATCH ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಬಾಂಗ್ಲಾ ತಂಡದ ನಾಯಕತ್ವದ ಜವಾಬ್ದಾರಿ ನಜ್ಮುಲ್ ಹಸನ್ ಶಾಂಟೋಗೆ ನೀಡಲಾಗಿದೆ.
ಉಭಯ ತಂಡಗಳಿಗೆ ಚಾಂಪಿಯನ್ಸ್ ಟ್ರೋಫಿ 2025ರ ಮೊದಲ ಪಂದ್ಯ ಇದಾಗಿದೆ. ಈ ಟೂರ್ನಿಯಲ್ಲಿ ಎಲ್ಲ ತಂಡಗಳು ತಲಾ ಮೂರು ಪಂದ್ಯಗಳನ್ನು ಮಾತ್ರ ಆಡುತ್ತಿದ್ದು ಈ ಹಿನ್ನೆಲೆ ಪ್ರತಿಯೊಂದು ಪಂದ್ಯವೂ ಮಹತ್ವದಾಗಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯ ಇಂದು ನಡೆಯಲಿದೆ.
ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಆತಿಥ್ಯ ವಹಿಸಿಕೊಳ್ಳುತ್ತಿದೆ. INDIA VS BANGLADESH MATCH ತಂಡಗಳು ಕೂಡ ಈ ಪಂದ್ಯದಲ್ಲಿ ಗೆದ್ದು ಉತ್ತಮ ಆರಂಭದ ಗುರಿಯನ್ನು ಹೊಂದಿವೆ.
ಏತನ್ಮಧ್ಯೆ ಬಾಂಗ್ಲಾ ವಿರುದ್ಧದ ಈ ಪಂದ್ಯದಕ್ಕೆ ಭಾರತ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಹಾಗಾದರೆ ಭಾರತದ ಸಂಭಾವ್ಯ ಪ್ಲೇಯಿಂಗ್-11 ಹೇಗಿರಲಿದೆ ಎಂದು ಇದೀಗ ತಿಳಿಯೋಣ.
Top Order:
ಭಾರತೀಯ ಕ್ರಿಕೆಟ್ ತಂಡದ ಟಾಪ್ ಆರ್ಡರ್ ಸಂಪೂರ್ಣವಾಗಿ ಸಿದ್ಧವಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭಮನ್ ಗಿಲ್ ಆರಂಭಿಕರಾಗಿ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ. ಈ ಇಬ್ಬರ ನಂತರ, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ.
Middle order:
INDIA VS BANGLADESH MATCH ಮಧ್ಯಮ ಕ್ರಮಾಂಕದ ಜವಾಬ್ದಾರಿ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಅವರ ಕೈಯಲ್ಲಿರುತ್ತದೆ. ಅಯ್ಯರ್ 4 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಮತ್ತು ಅಕ್ಷರ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. 6ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.
Finisher Responsibility:
ಇಬ್ಬರು ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಅನುಭವಿ ಸ್ಪಿನ್ನರ್ ರವೀಂದ್ರ ಜಡೇಜಾ ಫಿನಿಶರ್ ಪಾತ್ರ ವಹಿಸಲಿದ್ದಾರೆ. ಈ ಇಬ್ಬರೂ ಭಾರತ ಪರ 7 ಮತ್ತು 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬರಲಿದ್ದಾರೆ.
Bowling Lineup:
ಕುಲದೀಪ್ ಯಾದವ್ ತಂಡದ ಪ್ರಮುಖ ಸ್ಪಿನ್ ಬೌಲರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಸಾತ್ ನೀಡಲಿದ್ದಾರೆ.
Fast bowling:
ಈ ಪಂದ್ಯದಲ್ಲಿ ಇಬ್ಬರು ಪ್ರಮುಖ ವೇಗದ ಬೌಲರ್‌ಗಳೊಂದಿಗೆ ಭಾರತ ಕಣಕ್ಕಿಳಿಯಲಿದೆ. ಮೊಹಮ್ಮದ್ ಶಮಿ ಮತ್ತು ಅರ್ಷದೀಪ್ ಸಿಂಗ್ ವೇಗದ ಬೌಲಿಂಗ್ ಲೈನ್‌ಅಪ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರೊಂದಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಸಾತ್ ನೀಡಲಿದ್ದಾರೆ.
India’s potential team
- ರೋಹಿತ್ ಶರ್ಮಾ (ನಾಯಕ)
- ಶುಭಮನ್ ಗಿಲ್ (ಉಪ ನಾಯಕ)
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಅಕ್ಷರ್ ಪಟೇಲ್
- ಕೆಎಲ್ ರಾಹುಲ್
- ಹಾರ್ದಿಕ್ ಪಾಂಡ್ಯ
- ರವೀಂದ್ರ ಜಡೇಜಾ
- ಕುಲದೀಪ್ ಯಾದವ್
- ಮೊಹಮ್ಮದ್ ಶಮಿ
- ಅರ್ಶ್ದೀಪ್ ಸಿಂಗ್
Players to be left out:
ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಈ ನಾಲ್ವರು ಆಟಗಾರರು ಹೊರಗುಳಿಯುವ ಸಾಧ್ಯತೆ ಇದೆ.
ಇದನ್ನು ಓದಿರಿ : Jammu Railway Division A Big Step Towards Uplifting Region’s Dwindling Economy, Claim Jammuites