Cuttack (Odisha) News:
INDIA VS ENGLAND 2ND ODI ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳಿಂದ ಸೋತಿರುವ ಆಂಗ್ಲರಿಗೆ ಸರಣಿ ಜೀವಂತವಾಗಿರಿಸಲು ಇಂದು ಗೆಲುವು ಅನಿವಾರ್ಯ. ಇಂಗ್ಲೆಂಡ್ ತಂಡ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.
ತಂಡದಲ್ಲಿ ವೇಗಿಗಳಾದ ಮಾರ್ಕ್ ವುಡ್, ಗಸ್ ಅಟ್ಕಿನ್ಸನ್ ಮತ್ತು ಜೇಮೀ ಓವರ್ಟನ್ ಅವರಿಗೆ ಸ್ಥಾನ ನೀಡಲಾಗಿದೆ. ಇಲ್ಲಿನ ಬಾರಾಮತಿ ಕ್ರಿಕೆಟ್ ಮೈದಾನದಲ್ಲಿ ಭಾರತದ ನಡೆಯುತ್ತಿರುವ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ತಂಡದಲ್ಲಿಯೂ ಕೂಡ ಎರಡು ಬದಲಾವಣೆ ಮಾಡಲಾಗಿದೆ.
INDIA VS ENGLAND 2ND ODI ಗಾಯದಿಂದ ಚೇತರಿಸಿಕೊಂಡಿರುವ ವಿರಾಟ್ ಕೊಹ್ಲಿ ಟೀಂಗೆ ಮರಳಿದ್ದು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಹೊರಗುಳಿದಿದ್ದಾರೆ. ಇನ್ನು, ಕುಲದೀಪ್ ಯಾದವ್ ಅವರ ಬದಲಿಗೆ ಸ್ಪಿನ್ನರ್ ವರುಣ್ ಚಕ್ರವರ್ತಿಗೆ 11ರ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ. ಇದರೊಂದಿಗೆ, ವರುಣ್ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡುತ್ತಿದ್ದಾರೆ.
India:
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ
The teams are:
ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್
ಇದನ್ನು ಓದಿರಿ : one of biggest Naxal encounter 2 jawans also killed!