spot_img
spot_img

INDIAN FLAG CONTROVERSY IN PAKISTAN : ಕರಾಚಿ ಸ್ಟೇಡಿಯಂನಲ್ಲಿ ಹಾರಾಡಿದ ತಿರಂಗ

spot_img
spot_img

Share post:

ICC Champions Trophy-2025:

ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಪ್ರಾರಂಭವಾಗಿದೆ. ಪಾಕಿಸ್ತಾನದ ಕರಾಚಿ ಮೈದಾನದಲ್ಲಿ ಭಾರತದ ತಿರಂಗ ಧ್ವಜ ಹಾರಾಡುತ್ತಿದೆ. INDIAN FLAG CONTROVERSY IN PAKISTAN ಐಸಿಸಿ ನಿಯಮದ ಪ್ರಕಾರ, ಐಸಿಸಿ ಆಯೋಜಿತ ಟೂರ್ನಿಗಳಲ್ಲಿ ಭಾಗಿಯಾಗುವ ಪ್ರತಿಯೊಂದು ತಂಡಗಳ ರಾಷ್ಟ್ರಧ್ವಜವನ್ನು ಪ್ರದರ್ಶಿಸಬೇಕು. \

ಆದರೆ ಚಾಂಪಿಯನ್ಸ್​ ಟ್ರೋಫಿ ಪ್ರಾರಂಭಕ್ಕೂ ಮೊದಲು ಪಾಕಿಸ್ತಾನ, ಪಂದ್ಯಗಳು ನಡೆಯುತ್ತಿರುವ ಕ್ರೀಡಾಂಗಣಗಳಾದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್​ ಮೈದಾನಗಳಲ್ಲಿ ಭಾರತದ ಧ್ವಜವನ್ನು ಹೊರತುಪಡಿಸಿ ಉಳಿದೆಲ್ಲಾ ದೇಶಗಳ ಧ್ವಜವನ್ನು ಪ್ರದರ್ಶಿಸಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ INDIAN FLAG CONTROVERSY IN PAKISTAN ಕಾರಣವಾಗಿತ್ತು.

ಇಂದಿನಿಂದ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಪ್ರಾರಂಭವಾಗಿದೆ. 8 ವರ್ಷಗಳ ಬಳಿಕ ನಡೆಯುತ್ತಿರುವ ಪ್ರತಿಷ್ಠಿತ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿದೆ. ಇಂದು ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಬರುತ್ತಿಲ್ಲ.

ಹಾಗಾಗಿ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಡುವ ತಂಡಗಳ ಧ್ವಜಗಳನ್ನು ಮಾತ್ರ ಪ್ರದರ್ಶಿಸಿದ್ದೇವೆ. ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಬಾಂಗ್ಲಾದೇಶ ಇನ್ನೂ ಪಾಕಿಸ್ತಾನವನ್ನು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಆ ಎರಡೂ ದೇಶಗಳ ರಾಷ್ಟ್ರಧ್ವಜಗಳನ್ನು ಪ್ರದರ್ಶಿಸಿಲ್ಲ ಎಂದು ಸಮಜಾಯಿಷಿ ನೀಡಿತ್ತು.

ಈ ಎಲ್ಲ ಬೆಳವಣಿಗೆಯ ನಂತರ ಇದೀಗ ಕರಾಚಿ ಮೈದಾನದಲ್ಲಿ​ ತಿರಂಗ ಧ್ವಜವನ್ನು ಪ್ರದರ್ಶಿಸಿದೆ. ಈ ಬಾರಿಯ ಟೂರ್ನಿ ಹೈಬ್ರಿಡ್​ ಮಾದರಿಯಲ್ಲಿ ನಡೆಯುತ್ತಿದೆ. INDIAN FLAG CONTROVERSY IN PAKISTAN ದುಬೈ ಮತ್ತು ಪಾಕಿಸ್ತಾನಗಳಲ್ಲಿ ಪಂದ್ಯಗಳು ಏರ್ಪಾಡಾಗಿವೆ.

ಭಾರತ ತನ್ನೆಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಉಳಿದ ತಂಡಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ನಡುವೆ ಕರಾಚಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಎಲ್ಲಾ ರಾಷ್ಟ್ರಗಳ ಜೊತೆ ಭಾರತದ ಧ್ವಜವನ್ನೂ ಪ್ರದರ್ಶಿಸಲಾಗಿದೆ. ನಾಳೆಯಿಂದ ಭಾರತ ತನ್ನ ಅಭಿಯಾನ ಪ್ರಾರಂಭಿಸಲಿದೆ.

India Matches:

  • ಫೆ.20ರಂದು ಭಾರತ-ಬಾಂಗ್ಲಾದೇಶ ಪಂದ್ಯ.
  • ಫೆ.23ರಂದು ಭಾರತ-ಪಾಕಿಸ್ತಾನ ಪಂದ್ಯ.
  • ಮಾ.2ರಂದು ಭಾರತ-ನ್ಯೂಜಿಲೆಂಡ್​ ಪಂದ್ಯ.

ಟೂರ್ನಿಯಲ್ಲಿ 8 ತಂಡಗಳು ಗುಂಪು ಹಂತದಲ್ಲಿ ತಲಾ ಮೂರು ಪಂದ್ಯಗಳನ್ನು ಆಡಲಿವೆ. ಎ ಮತ್ತು ಬಿ ಗುಂಪುಗಳಲ್ಲಿ ತಲಾ ನಾಲ್ಕು ತಂಡಗಳಿವೆ.

ಇದನ್ನು ಓದಿರಿ : India Has Potential In Agri, Eco, Rural & Village Tourism, But Needs More Attention: Experts

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...