spot_img
spot_img

INVEST KARNATAKA 2025 : ರಾಜ್ಯದ ‘ಪ್ರಗತಿಯ ಮರುಕಲ್ಪನೆ’ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಇಂದು ಚಾಲನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ರಾಜನಾಥ್​ ಸಿಂಗ್​ INVEST KARNATAKA 2025 ಕ್ಕೆ ಚಾಲನೆ ನೀಡಲಿದ್ದಾರೆ. ಇಂದಿನಿಂದ ಫೆ.14ರ ವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲಿರುವ ಉದ್ದಿಮೆ ದಿಗ್ಗಜರು, ಹೂಡಿಕೆದಾರರು, ನವೋದ್ಯಮಗಳ ಕನಸುಗಾರರು, ನೀತಿ ನಿರೂಪಣೆಯ ಚಿಂತಕರಿಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಕೆಂಪುರತ್ನಗಂಬಳಿಯ ಸ್ವಾಗತ ಕೋರುವ ಸಿದ್ಧತೆಗಳೆಲ್ಲ ಪೂರ್ಣಗೊಂಡಿವೆ.

ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ನವೋದ್ಯಮ, ಏರೊಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ ವಿಶ್ವದಾದ್ಯಂತ ಪ್ರಖ್ಯಾತಿಯ ಛಾಪು ಮೂಡಿಸಿರುವ ಕರ್ನಾಟಕವು, ‘ಪ್ರಗತಿಯ ಮರುಕಲ್ಪನೆ’ ಧ್ಯೇಯದ INVEST KARNATAKA 2025 ರ ಮೂಲಕ ವಿಶ್ವದ ಹೂಡಿಕೆದಾರರನ್ನು ರಾಜ್ಯದತ್ತ ಸೆಳೆಯಲು ಸಜ್ಜಾಗಿದೆ.

“ಕೆಲವು ಕೇಂದ್ರ ಸಚಿವರು ನಾಲ್ಕು ದಿನಗಳಲ್ಲಿ ಯಾವುದಾದರೊಂದು ದಿನ ಭಾಗವಹಿಸುವ ಭರವಸೆ ನೀಡಿದ್ದಾರೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ಬುಧವಾರದಿಂದ ಶುಕ್ರವಾರದವರೆಗೆ ನಡೆಯಲಿರುವ ವಿವಿಧ ವಿಚಾರಗೋಷ್ಠಿಗಳಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು ಉದ್ದಿಮೆ ಲೋಕದ ಭವಿಷ್ಯದ ಬಗೆಗಿನ ತಮ್ಮ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ. ಪ್ರಮುಖ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗುವುದು” ಎಂದು ವಿವರಿಸಿದರು.

INVEST KARNATAKA 2025 “ಇಂದು ಸಂಜೆ 4 ಗಂಟೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್‌ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ” ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.

“INVEST KARNATAKA 2025  ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಇನ್ವೆಸ್ಟ್‌ ಕರ್ನಾಟಕ ಪ್ರಶಸ್ತಿ, ಎಸ್‌ಎಂಇ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ʼಎಸ್‌ಎಂಇ ಕನೆಕ್ಟ್‌- 25ʼ, ವೆಂಚುರೈಸ್‌ನ ಎರಡನೆ ಆವೃತ್ತಿ ಇತರ ವಿಶೇಷತೆಗಳಾಗಿವೆ. 60ಕ್ಕೂ ಹೆಚ್ಚು ಕಂಪನಿಗಳು ಮತ್ತು ನವೋದ್ಯಮಗಳು ತಯಾರಿಕೆ, ಸಂಚಾರ ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲಿವೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್‌ ಸಿಟಿ-ನಲ್ಲಿ ಸಹಭಾಗಿತ್ವ ವಿಸ್ತರಿಸಲು ಆದ್ಯತೆ ನೀಡಲಾಗುವುದು” ಎಂದು ಹೇಳಿದರು.

“75ಕ್ಕೂ ಹೆಚ್ಚು ಗಣ್ಯ ಭಾಷಣಕಾರರು ಭಾಗವಹಿಸಲಿದ್ದಾರೆ. 25ಕ್ಕೂ ಹೆಚ್ಚು ತಾಂತ್ರಿಕ ಅಧಿವೇಶನಗಳು, 10ಕ್ಕೂ ಹೆಚ್ಚು ದೇಶಗಳ ಜೊತೆಗಿನ ಸಭೆ ಮತ್ತು ಎಸ್‌ಎಂಇ ಕನೆಕ್ಟ್‌ಗೆ ಸಂಬಂಧಿಸಿದ ಸಮಾಲೋಚನೆಗಳಿಗೆ ಈ ಹೂಡಿಕೆ ಶೃಂಗಸಭೆಯು ಸಾಕ್ಷಿಯಾಗಲಿದೆ. ರಾಜ್ಯಕ್ಕೆ ಭಾರಿ ಪ್ರಮಾಣದಲ್ಲಿ ಬಂಡವಾಳ ಹರಿದು ಬರಲು ಅಗತ್ಯವಾದ ಭೂಮಿಕೆಯನ್ನು ರಾಜ್ಯ ಸರ್ಕಾರವು ಹದಗೊಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹತ್ತಾರು ಪ್ರಥಮಗಳನ್ನು ತನ್ನ ಮುಡಿಗೆ ಏರಿಸಿಕೊಂಡಿರುವ ಕರ್ನಾಟಕವು, ಈ ಸಮಾವೇಶದ ನೆರವಿನಿಂದ ತನ್ನ ಕೈಗಾರಿಕಾ ಪ್ರಗತಿಯ ವೇಗ ಹೆಚ್ಚಿಸಲು ದೃಢ ನಿರ್ಧಾರ ಮಾಡಿದೆ” ಎಂದು ವಿವರಿಸಿದರು.

ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಪ್ರಮುಖ ತಾಣವನ್ನಾಗಿ ಇಡೀ ವಿಶ್ವಕ್ಕೆ ಪ್ರದರ್ಶಿಸಲು, ಪಾಲುದಾರಿಕೆ ಉತ್ತೇಜಿಸಲು ಮತ್ತು ವಿವಿಧ ಕೈಗಾರಿಕಾ ವಲಯಗಳಲ್ಲಿ ನಾವೀನ್ಯತೆಗೆ ಚಾಲನೆ ನೀಡುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಇದು ಬಂಡವಾಳ ಹೂಡಿಕೆಗೆ ವೇದಿಕೆಯಾಗಿರುವುದರ ಜೊತೆಗೆ, ಸರ್ಕಾರ ಮತ್ತು ಉದ್ಯಮ ವಲಯದ ನಡುವಣ ಅರ್ಥಪೂರ್ಣ ಸಹಯೋಗ ಬೆಸೆಯುವುದಕ್ಕೂ ನೆರವಾಗಲಿದೆ. ವಿವಿಧ ಕೈಗಾರಿಕಾ ವಲಯಗಳಲ್ಲಿ ಜಾಗತಿಕ ಪಾಲುದಾರಿಕೆ ಬೆಳೆಸುವುದರ ಜೊತೆಗೆ, ನಾವೀನ್ಯತೆ ಮತ್ತು ಹೂಡಿಕೆ ಕೇಂದ್ರವಾಗಿರುವ ಕರ್ನಾಟಕದ ಮಹತ್ವವನ್ನು ಇಡೀ ವಿಶ್ವಕ್ಕೆ ಮತ್ತೊಮ್ಮೆ ಮನದಟ್ಟು ಮಾಡಿಕೊಡಲಿದೆ ಎಂದರು.

ಫೆಬ್ರುವರಿ 12 ರಿಂದ 14ರ ವರೆಗೆ ಸಮಾವೇಶ ಸ್ಥಳದಲ್ಲಿ ವಿವಿಧ ವಿಚಾರಗೋಷ್ಠಿಗಳು, ಸಂವಾದ, ಸಮೂಹ ಚರ್ಚೆಗಳೂ ನಡೆಯಲಿವೆ.

Feb. 12:

  • ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ
  • ಕ್ಷಮತೆಯ ಮಾರ್ಗೋಪಾಯಗಳು
  • ಭವಿಷ್ಯಕ್ಕೆ ನಾವೀನ್ಯತೆ.
  • ಮುಂದಾಳತ್ವ

Feb. 13:

  • ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ- ಸಂವಾದ.
  • ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ- ಸಮೂಹ ಚರ್ಚೆ.

Feb. 14 :

  • ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು

ಇದನ್ನು ಓದಿರಿ : The World Congress on Translational Cancer Research discusses innovative cancer treatments,

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...