spot_img
spot_img

INVEST KARNATAKA 2025:3 ಸಾವಿರ ಮೆಗಾವ್ಯಾಟ್ ಪವನ ವಿದ್ಯುತ್ ಉತ್ಪಾದನೆಗೆ ರಾಜ್ಯ ಸರ್ಕಾರದ ಜೊತೆ ಸುಜ್ಲಾನ್ ಒಪ್ಪಂದ

spot_img
spot_img

Share post:

Bangalore News:

ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್‌ ಕರ್ನಾಟಕ-2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಗೆ ಬಂಪರ್​​ ಹೂಡಿಕೆ ಹರಿದಿದೆ.”ನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ.

ಇದರಿಂದ ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ” ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ ತಿಳಿಸಿದ್ದಾರೆ.ಇನ್ವೆಸ್ಟ್‌ KARNATAKA-2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯು ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.

Suzlan Company Agreement with Govt.ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್‌ ಸಾಮರ್ಥ್ಯದ ಬಹುಬಗೆಯ ಬೇಳೆಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ವಿಂಗ್ಸ್‌- ವಿಟೆರಾ ಕಂಪನಿಯು 250 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಿದೆ. ಈ ಘಟಕವು ಕಾರ್ಯಾರಂಭ ಮಾಡಿದ 2ನೇ ವರ್ಷದಿಂದ 800 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ನಡೆಸಲಿದೆ.

ದಕ್ಷಿಣ ಭಾರತದಲ್ಲಿನ ಬೇಳೆಕಾಳುಗಳ ಅತಿದೊಡ್ಡ ಸಂಸ್ಕರಣಾ ಘಟಕ ಇದಾಗಿರಲಿದೆ.ವಿಜಯಪುರದಲ್ಲಿ 3 ಸಾವಿರ ಮೆಗಾವ್ಯಾಟ್‌ ಸಾಮರ್ಥ್ಯದ ಪವನ ವಿದ್ಯುತ್‌ ಉತ್ಪಾದನೆ ಅಭಿವೃದ್ಧಿಪಡಿಸಲು ಮತ್ತು ಅತ್ಯಾಧುನಿಕ ವಿಂಡ್‌ ಟರ್ಬೈನ್‌ ಬ್ಲೇಡ್‌ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್‌ ಕಂಪೆನಿಯು ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಉಪಕ್ರಮವು, ಗಾಳಿ ವಿದ್ಯುತ್‌ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಭಾರತವನ್ನು ಅಭಿವೃದ್ಧಿಪಡಿಸಲು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಸುಸ್ಥಿರತೆ ಸಾಧಿಸಲು ನೆರವಾಗಲಿದೆ.

Separate Collection Centre:ಕಾರ್ಮಿಕರ ಕುಶಲತೆ ಹೆಚ್ಚಿಸಲು ಮತ್ತು ಉದ್ಯೋಗ ಅವಕಾಶ ಹೆಚ್ಚಿಸುವ ತನ್ನ ಬದ್ಧತೆಯ ಭಾಗವಾಗಿ ಸುಜ್ಲಾನ್‌, ಶೇಕಡಾ 90ರಷ್ಟು ಉದ್ಯೋಗಿಗಳಲ್ಲಿ ಐಟಿಐ ಪದವೀಧರರನ್ನು ನೇಮಿಸಿಕೊಳ್ಳಲಿದೆ. ವೃತ್ತಿ ಪರಿಣತಿ ಹೆಚ್ಚಿಸಲು ರಾಜ್ಯದ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪರಿಣತಿ ಅಭಿವೃದ್ಧಿಪಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.

ಈ ಉದ್ದೇಶಿತ ಘಟಕವು ಸ್ಥಳೀಯ ಉದ್ಯೋಗ ಅವಕಾಶ ಹೆಚ್ಚಳ, ಮಹಿಳೆಯರ ಸಬಲೀಕರಣ ಮತ್ತು ಗ್ರಾಮೀಣ ಆರ್ಥಿಕ ಪ್ರಗತಿಗೆ ಗಣನೀಯ ಕೊಡುಗೆ ನೀಡಲಿದೆ. ಕಂಪನಿಯು ಪ್ರತ್ಯೇಕ ಸಂಗ್ರಹಣಾ ಕೇಂದ್ರ ತೆರೆಯಲಿರುವುದರಿಂದ ಬೆಳೆಗಾರರಿಗೆ ಉತ್ಪನ್ನಗಳ ಮಾರಾಟ ಸುಗಮಗೊಳಿಸಿ ಹೆಚ್ಚಿನ ಆದಾಯ ಪಡೆಯಲು ನೆರವಾಗಲಿದೆ. ಇದರಿಂದ ಆಯ್ದ ಬೆಳೆಗಳ ಸಾಗುವಳಿ ಹೆಚ್ಚಿಸಲು ರೈತರಿಗೆ ಉತ್ತೇಜನ ದೊರೆಯಲಿದೆ. ಬೇಳೆಕಾಳುಗಳ ಆಮದು ಮೇಲಿನ ದೇಶದ ಅವಲಂಬನೆ ತಪ್ಪಿಸಲಿದೆ.

ಕೃಷಿ ಸ್ವಾವಲಂಬನೆಗೆ ಉತ್ತೇಜನ ಸಿಗಲಿದೆ.ಈ ಹೂಡಿಕೆ ಉಪಕ್ರಮಗಳ ಫಲವಾಗಿ ವಿಜಯಪುರ ಜಿಲ್ಲೆಯು ರಾಜ್ಯದ ಕೈಗಾರಿಕಾ ಹಾಗೂ ಕೃಷಿ ಪ್ರಗತಿಯನ್ನು ಮುನ್ನಡೆಸಲಿದೆ. ಪ್ರಾದೇಶಿಕ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ರಾಜ್ಯದ ಬದ್ಧತೆಯನ್ನೂ ಈ ಒಪ್ಪಂದಗಳು ಪುನರುಚ್ಚರಿಸಿವೆ.

 

ಇದನ್ನು ಓದಿರಿ :5 Signs And Symptoms Of Hypothermia In Children That Parents Should Watch Out For

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...