spot_img
spot_img

ವಕೀಲೆ ‘ಜೀವಾ’ ಆತ್ಮಹತ್ಯೆ ಪ್ರಕರಣದ ತನಿಖೆ : ಹೈಕೋರ್ಟ್ ಸೂಚನೆ

spot_img
spot_img

Share post:

ಬೆಂಗಳೂರು: ವಕೀಲೆ ಎಸ್​. ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯ ವಿವರಗಳನ್ನು ಒದಗಿಸುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲ್ಲೆ ಸಿಸಿಬಿ ಪೊಲೀಸರಿಂದ ಪ್ರಕರಣದ ತನಿಖೆ ಚುರುಕುಗೊಂಡಿದೆ.

ಭೋವಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ಕುರಿತು ಸಿಐಡಿ ತನಿಖೆ ಎದುರಿಸಿದ್ದ ವಕೀಲೆ ಎಸ್​. ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯ ವಿವರಗಳನ್ನು ಒದಗಿಸುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸರಿಂದ ಪ್ರಕರಣದ ತನಿಖೆ ಚುರುಕು ಪಡೆದಿದೆ.

ಜೀವಾ ಆತ್ಮಹತ್ಯೆಯ ಕುರಿತು ಅವರ ಕುಟುಂಬದವರ ಹೇಳಿಕೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಂದೆಡೆ ಆತ್ಮಹತ್ಯೆಗೂ ಮುನ್ನ ಬರೆದಿದ್ದಾರೆ ಎನ್ನಲಾಗಿರುವ ಡೆತ್ ನೋಟ್‌ನ್ನು ಕೈಬರಹದ ದೃಢೀಕರಣಕ್ಕಾಗಿ ಎಫ್ಎಸ್ಎಲ್‌ಗೆ ರವಾನಿಸಲಾಗಿದೆ.

ಬಳಿಕ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳಿಗೆ ನೋಟಿಸ್​​ ನೀಡಿ ವಿಚಾರಣೆ ನಡೆಸಲು ಸಿಸಿಬಿ ಸಿದ್ಧತೆ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮಟಿರಿಯಲ್ಸ್​​ ಪೂರೈಸುತ್ತಿದ್ದ ಎಸ್​​. ಜೀವಾ ಆತ್ಮಹತ್ಯೆಗೆ ಶರಣಾದ ಘಟನೆ ನವೆಂಬರ್​ 22ರಂದು ನಡೆದಿತ್ತು. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟಿನಲ್ಲಿರುವ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು‌.

ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಐಡಿ ವಿಚಾರಣೆ ಎದುರಿಸಿದ್ದ, ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖಾ ಪ್ರಗತಿಯ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಪ್ರಾಸಿಕ್ಯೂಷನ್‌ಗೆ ಇತ್ತೀಚಿಗೆ ಹೈಕೋರ್ಟ್‌ ಆದೇಶಿಸಿತ್ತು.

ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಜೀವಾಗೆ ಸಿಐಡಿಯ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಕಿರುಕುಳ ನೀಡಿದ್ದಾರೆ, ಹಾಗೂ 25 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಮೃತಳ ಸಹೋದರಿ ಸಂಗೀತಾ ಆರೋಪಿಸಿದ್ದರು.

ಜೀವಾ ಬರೆದಿಟ್ಟಿದ್ದ ಡೆತ್ ನೋಟ್‌ ಹಾಗೂ ಮೃತಳ ಸಹೋದರಿ ನೀಡಿದ್ದ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್​, ಎಸಿಪಿ ಹಂತದ ಅಧಿಕಾರಿಯ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...