spot_img
spot_img

JALGAON TRAIN ACCIDENT:ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ.

spot_img
spot_img

Share post:

Jalgaon News :

ಇದರಿಂದಾಗಿ ಟ್ರೈನ್​ ನಿಂತಿದ್ದರಿಂದ ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು ಟ್ರ್ಯಾಕ್​ ಮೇಲೆ ತೆರಳುತ್ತಿರು. ಈ ವೇಳೆ, ಆ ಹಳಿ ಮೇಲೆ ಎದುರಿನಿಂದ ಬರುತ್ತಿದ್ದ ಬೆಂಗಳೂರು-ದೆಹಲಿ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿದ್ದಾರೆ ಎಂದು ಕೇಂದ್ರ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ರೈಲಿನಿಂದ ಕೆಳಗೆ ಜಿಗಿದ ಪ್ರಯಾಣಿಕರ ಮೇಲೆ ಪಕ್ಕದ ಹಳಿಯಲ್ಲಿ ಬಂದ ಕರ್ನಾಟಕ ಎಕ್ಸ್​ಪ್ರೆಸ್ ರೈಲು ಹರಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿದೆ.

ಉತ್ತರ ಮಹಾರಾಷ್ಟ್ರದ JALGAON​​​ನಲ್ಲಿ ಬುಧವಾರ ಸಾಯಂಕಾಲ 5 ಗಂಟೆಗೆ ಈ ದುರಂತ ಸಂಭವಿಸಿದೆ. ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ಯಾರೋ ಚೈನ್ ಎಳೆದಿದ್ದರು.

Train not visible due to curvature of track :ಇದನ್ನು ನೋಡಿ ಕರ್ನಾಟಕ ಎಕ್ಸ್​ಪ್ರೆಸ್​ ಲೋಕೋಪೈಲಟ್ ಕೂಡ ಬ್ರೇಕ್ ಹಾಕಿದ್ದರು.

ಎರಡೂ ರೈಲುಗಳ ಚಾಲಕರು ಶಿಷ್ಟಾಚಾರ ಪಾಲಿಸಿದ್ದು, ಅಪಘಾತ ತಪ್ಪಿಸಲು ಎಲ್ಲ ಪ್ರಯತ್ನ ಮಾಡಿದ್ದಾರೆ ಎಂದು ಹಿರಿಯ ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಳಿ ಕರ್ವ್​ನಿಂದಾಗಿ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರಿಗೆ ಸರಿಯಾಗಿ ಕಾಣಿಸಿಲ್ಲ.

ಪಚೋರಾ ಬಳಿಯ ಮಹೇಜಿ ಮತ್ತು ಪರ್ಧಾಡೆ ನಿಲ್ದಾಣಗಳ ನಡುವೆ ರೈಲು ನಿಂತಾಗ ಪುಷ್ಪಕ್ ಎಕ್ಸ್‌ಪ್ರೆಸ್‌ನ ಲೋಕೋಪೈಲಟ್ ನಿಯಮದ ಪ್ರಕಾರ ಫ್ಲ್ಯಾಷರ್ ಲೈಟ್ ಆನ್ ಮಾಡಿದ್ದರು.

PM Modi’s condolence, relief announcement:ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಜಲಗಾಂವ್ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ.

ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಎಲ್ಲಾ ವೈದ್ಯಕೀಯ ವೆಚ್ಚಗಳನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.

“ಮಹಾರಾಷ್ಟ್ರದ JALGAONನಲ್ಲಿ ರೈಲ್ವೆ ಹಳಿಗಳಲ್ಲಿ ಸಂಭವಿಸಿದ ದುರಂತದಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಅಧಿಕಾರಿಗಳು ನೀಡುತ್ತಿದ್ದಾರೆ” ಎಂದು ಪ್ರಧಾನಿ ಕಚೇರಿ ಎಕ್ಸ್​ ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ರೈಲು ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. JALGAON ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1.5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 5,000 ರೂ. ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...