ಮೈಸೂರು: ಬುಡಕಟ್ಟು ಸಮುದಾಯಗಳು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಸಮಗ್ರ ಅಭಿವೃದ್ಗಾಗಿ ರೂಪಿಸಿರುವ ಪ್ರಧಾನಮಂತ್ರಿ ಜನ್‌ಜಾತೀಯ ಉನ್ನತ್ ಗ್ರಾಮ ಯೋಜನೆಯಡಿ ಜಿಲ್ಲೆಯ 62 ಗ್ರಾಮಗಳು ಆಯ್ಕೆಯಾಗಿವೆ.
ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ಹುಣಸೂರು, ಮೈಸೂರು, ಪಿರಿಯಾಪಟ್ಟಣ, ನಂಜನಗೂಡು, ತಿ.ನರಸೀಪುರ ತಾಲೂಕಿನಲ್ಲಿ ಕೇಂದ್ರ ಸರಕಾರದ ಈ ಯೋಜನೆಗೆ ಮೊದಲ ಹಂತದಲ್ಲಿಜಿಲ್ಲೆಯ 62 ಗ್ರಾಮಗಳನ್ನು ಆಯ್ಕೆ ಮಾಡಿದ್ದು, ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಶೀಘ್ರ ಸರ್ವೆ ಆರಂಭವಾಗಲಿದೆ.
ಬುಡಕಟ್ಟು ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಶಿಕ್ಷಣ, ಆರೋಗ್ಯ, ಕೃಷಿ, ಕೌಶಲ್ಯ ಅಭಿವೃದ್, ಉದ್ಯೋಗ ಆದಾಯ ಉತ್ಪಾದನೆಯಂತಹ ನಾನಾ ಕ್ಷೇತ್ರಗಳಲ್ಲಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯೋಜನೆ ತಯಾರಾಗಲಿದೆ.
ಯೋಜನೆಯಡಿ ಪರಿಶಿಷ್ಟ ಪಂಗಡ ಹಾಡಿ, ಕಾಲೊನಿಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ನಾನಾ ಇಲಾಖೆಗಳಿಂದ ಸರ್ವೆ ನಡೆಸಲಾಗುತ್ತದೆ. ಸರ್ವೆ ಸಂದರ್ಭದಲ್ಲಿಮೂಲ ಸೌಲಭ್ಯಗಳನ್ನು ಹೊಂದಿಲ್ಲದೆ ಇರುವ ಮಾಹಿತಿಯನ್ನು ಕ್ರೋಢಿಕರಿಸಲಾಗುತ್ತದೆ.
17 ಇಲಾಖೆಗಳ ಸಮನ್ವಯತೆ: ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದ ಕಾರಣ ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳ್ಳುತ್ತಿರಲಿಲ್ಲ. ವಿವಿಧ ಇಲಾಖೆಗಳ ನೋಡಲ್ ಅಕಾರಿಗಳನ್ನು ನೇಮಿಸಲಾಗಿದ್ದು, ವಿಸ್ತೃತ ಯೋಜನಾ ವರದಿ ತಯಾರಿಸಿದ ಬಳಿಕ ಕೇಂದ್ರ ಸರಕಾರಕ್ಕೆ ಕ್ರಿಯಾ ಯೋಜನೆಯಾಗಿ ಸಮನ್ವಯತೆ ಕೊರತೆಗೆ ಕಡಿವಾಣ ಹಾಕಿರುವ ಕೇಂದ್ರ ಸರಕಾರ 17 ಇಲಾಖೆಗಳಿಗೆ ಪ್ರತ್ಯೇಕ ಜವಾಬ್ದಾರಿ ನೀಡಿ 25 ಕಾರ್ಯಕ್ರಮಗಳನ್ನು ರೂಪಿಸುವಂತೆ ಹೇಳಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ, ಮಹಿಳಾ ಮತ್ತು ಮಕ್ಕಳ, ಶಿಕ್ಷಣ, ಆಯುಷ್, ಟೆಲಿಕಾಂ, ಕೃಷಿ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್, ಪಶುಸಂಗೋಪನಾ ಮತ್ತು ಹೈನುಗಾರಿಕೆ, ಪ್ರವಾಸೋದ್ಯಮ ಇಲಾಖೆ, ಬುಡಕಟ್ಟು ಮಂತ್ರಾಲಯಗಳ ಸಚಿವಾಲಯ ಸೇರಿ ಸಮನ್ವಯತೆಯಿಂದ ವರದಿಯನ್ನು ತಯಾರಿಸುವಂತೆ ಹೇಳಲಾಗಿದೆ.