Bangalore News:
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ JAYALALITHA JEWELLERY ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ನಿರ್ಧರಿಸಿತು. ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, 2025ರ ಫೆಬ್ರವರಿ 14 ಮತ್ತು 15ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.
JAYALALITHA JEWELLERY ಆಸ್ತಿಗೆ ತಾವೇ ವಾರಸುದಾರರು ಎಂದು ಅವರ ಸಹೋದರನ ಸಂಬಂಧಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿ ಆದೇಶಿಸಿತ್ತು. JAYALALITHA JEWELLERY ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಮತ್ತೊಮ್ಮೆ ಈ ಆದೇಶ ಮಾಡಿದೆ. ಅಲ್ಲದೆ, ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು ಆರು ದೊಡ್ಡ ಪೆಟ್ಟಿಗೆಗಳ (ಟ್ರಂಕ್) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಆಭರಣಗಳನ್ನು ಪಡೆದುಕೊಳ್ಳಬೇಕು ಎಂದು ತಮಿಳುನಾಡು ಸರ್ಕಾರಕ್ಕೆ ತಿಳಿಸಿದೆ.
ಅಗತ್ಯ ಭದ್ರತೆ ಮತ್ತು ಪೆಟ್ಟಿಗೆಗಳೊಂದಿಗೆ ಬಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಚಿನ್ನಾಭರಣಗಳನ್ನು ಒಯ್ಯುವಂತೆ ತಮಿಳುನಾಡು ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿದೆ.
What are the items?:
JAYALALITHA JEWELLERY 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.
Background of the case:
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜೊತೆಗೆ, ಜಪ್ತಿ ಮಾಡಲಾದ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು.
ಅದರಿಂದ ಬಂದ ಹಣವನ್ನು ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಈ ನಡುವೆ ಜಯಲಿತಾ ಮೃತಪಟ್ಟಿದ್ದರು. ಆದ್ದರಿಂದJAYALALITHA JEWELLERY ಹಸ್ತಾಂತರ ಕುರಿತು ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡುವಂತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಓದಿರಿ : POLICE RECRUITMENT RESERVATION : ಪೊಲೀಸ್ ನೇರ ನೇಮಕಾತಿಯಲ್ಲಿ ಪಿಸಿ – ಡಿವೈಎಸ್ಪಿವರೆಗೆ ಕ್ರೀಡಾಪಟುಗಳಿಗೆ ಮೀಸಲಾತಿ ಹೆಚ್ಚಳ