ಬೆಂಗಳೂರು: ಕರ್ನಾಟಕ ಬ್ಯಾಂಕ್ನಲ್ಲಿ ಉದ್ಯೋಗ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕರ್ನಾಟಕ ಬ್ಯಾಂಕ್ನಲ್ಲಿ ಖಾಲಿ ಇರುವ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರೇಡ್- 1 ಶ್ರೇಣಿಯ ಹುದ್ದೆಗಳಿಗೆ ದೇಶಾದ್ಯಂತ ನೇಮಕಾತಿ ನಡೆಸಲಾಗುತ್ತದೆ. ಒಟ್ಟು ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಿಲ್ಲ. ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ. ಸಿಎ, ಸಿಎಸ್, ಸಿಎಂಎ, ಐಸಿಡಬ್ಲ್ಯೂಎ ಪದವೀಧರರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗರಿಷ್ಠ ವಯೋಮಿತಿ 28 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 800 ರೂ ಅರ್ಜಿ ಶುಲ್ಕ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 700 ರೂ ಅರ್ಜಿ ಶುಲ್ಕವಿದೆ.
ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗ, ಕಲಬುರಗಿಯಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ನವೆಂಬರ್ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಡಿಸೆಂಬರ್ 10 ಕಡೇಯ ದಿನಾಂಕವಾಗಿರುತ್ತದೆ. ಸಂಪೂರ್ಣ ಮಾಹಿತಿಗೆ karnatakabank.com ವೆಬ್ ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now