Tumkur News:
ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರತ JOURNALISTS CONFERENCE ಸಂಘ ಆಯೋಜಿಸಿದ್ದ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ, ಸಮಾಜದಲ್ಲಿರುವ ಮೇಲು-ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು. ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ. ಕಲ್ಪಿತ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಉಚಿತ ಬಸ್ ಪಾಸ್ ಸದ್ಯದಲ್ಲೇ ಗ್ರಾಮೀಣ ಪತ್ರಕರ್ತರ ಕೈ ಸೇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
Bus pass in few days:
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ. ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಮಳಿಗೆಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಮಹಿಳಾ ಸ್ವ ಸಹಾಯ ಸಂಘಗಳು ಸಿದ್ಧಪಡಿಸಿದ ತಿಂಡಿ ಸವಿದರು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
Congratulations to KV Prabhakar:
ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿ ಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.
ಇದನ್ನು ಓದಿರಿ : NAGPUR VIDARBHA ORANGES : ಕಿತ್ತಳೆಗೆ ಬೇಡಿಕೆ ಬರಬೇಕಾದರೆ ರೈತರಲ್ಲಿ ಇರುವ ಈ ತಪ್ಪು ತಿಳಿವಳಿಕೆ ಹೋಗಬೇಕಿದೆ