spot_img
spot_img

ಕಿರಿಯ ವೈದ್ಯರು ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಶಿಸ್ತುಕ್ರಮ: ಎಂದು ಹೇಳಿದ, ಸುಪ್ರೀಂ ಕೋರ್ಟ್.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ವೈದ್ಯರು ಆದೇಶ ಪಾಲಿಸದಿದ್ದರೆ ಸ್ಟೇಟ್ ಗೌರ್ಮೆಂಟ್ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕೆಲಸಕ್ಕೆ ಹಾಜರಾಗುವಂತೆ ಆದೇಶ ನೀಡಿದೆ.

ಇದನ್ನೂ ಓದಿ :ದರ್ಶನ್​ ವಿರುದ್ಧದ ಚಾರ್ಜ್​ಶೀಟ್​ಗೆ ಹೊಸ ಟ್ವಿಸ್ಟ್ ಕೊಡಲು ಮುಂದಾದ ದಾಸನ ಪರ ವಕೀಲರು..!

ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಕಿರಿಯ ವೈದ್ಯರು ಮತ್ತು ಪಶ್ಚಿಮ ಬಂಗಾಳ ಸರ್ಕಾರದ ‌ ಸಮಸ್ಯೆಗಳನ್ನು ಪರಿಗಣಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ರಾಹುಲ್​ ದ್ರಾವಿಡ್​ ಬೆನ್ನಿಗೆ ಬಿದ್ದ ಟಾಪ್​ IPL ಫ್ರಾಂಚೈಸಿಗಳು.. ಬ್ಲ್ಯಾಂಕ್ ಚೆಕ್ ಆಫರ್ ತಿರಸ್ಕರಿಸಿದ ಕನ್ನಡಿಗ ಏಕೆ ಗೊತ್ತಾ..?

ಕಿರಿಯ ವೈದ್ಯರು ನಾಳೆ ಸಂಜೆ 5 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು. ಅಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ವೈದ್ಯರು ಕೆಲಸಕ್ಕೆ ಒಂದು ವೇಳೆ ಮರಳದಿದ್ದರೆ, ರಾಜ್ಯ ಸರ್ಕಾರವು ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅವರು ಕರ್ತವ್ಯಕ್ಕೆ ಮರಳಿದರೆ, ಯಾವುದೇ ಶಿಕ್ಷಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ : 3 ವರ್ಷದ ಹಿಂದೆ ಸಾವಾಗಿದ್ದ ವ್ಯಕ್ತಿಯ ಬಗ್ಗೆ ಮಹತ್ವದ ಅಪ್‌ಡೇಟ್‌ : ಏನ್‌ ವಿಷ್ಯಾ ಗೊತ್ತಾ..?

ವೈದ್ಯರ ಸುರಕ್ಷತೆಗೆ ಪಶ್ಚಿಮ ಬಂಗಾಳ ಸರ್ಕಾರವು ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೈಟ್ ಕೋರ್ಟ್ ಒತ್ತಿಹೇಳಿತು. ಪ್ರತ್ಯೇಕ ಕರ್ತವ್ಯ ಕೊಠಡಿ, ಶೌಚಾಲಯ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಸೇರಿದಂತೆ ವೈದ್ಯರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಇದನ್ನೂ ಓದಿ : ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರದಲ್ಲಿ ನಟಿ ಸನ್ನಿ ಲಿಯೋನ್?

ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಪರಿಹರಿಸಬೇಕು. ಪುರುಷ ಮತ್ತು ಮಹಿಳಾ ವೈದ್ಯರಿಗೆ ವಿಶ್ರಾಂತಿ ಕೊಠಡಿಗಳನ್ನು ಸ್ಥಾಪಿಸುವುದು ಮತ್ತು ಸಿಸಿಟಿವಿಗಳನ್ನು ಅಳವಡಿಸುವುದು ಇದರಲ್ಲಿ ಸೇರಿದೆ. ಹೆಚ್ಚುವರಿ ಸಿಸಿಟಿವಿಗಳಿಗೆ ಹಣವನ್ನು ನಿಗದಿಪಡಿಸಲಾಗಿದೆ ಎಂದು ರಾಜ್ಯ ಪೊಲೀಸ್ ಅಫಿಡವಿಟ್ ದೃಢಪಡಿಸಬೇಕು. ಇದನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿರಬೇಕು ಎಂದು ಹೇಳಿದರು.

ಇದನ್ನೂ ಓದಿ : ಸೋಡಾ ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳೇನು ಗೊತ್ತೇ.?

WhatsApp Group Join Now
Telegram Group Join Now
Instagram Account Follow Now
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...