spot_img
spot_img

ಕರ್ನಾಟಕ ಲೋಕಾಯುಕ್ತದಲ್ಲಿ ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆಗೆ ಅರ್ಜಿ ಆಹ್ವಾನ

spot_img
spot_img

Share post:

ಬೆಂಗಳೂರು: ಲೋಕಾಯುಕ್ತ ಇಲಾಖೆಯಲ್ಲಿ ಒಟ್ಟು 30 ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆಗಳಿದ್ದು, ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್​ ಸಿ ವೃಂದದ ಟೈಪಿಸ್ಟ್​​ ಕಂ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಇನ್ನೆರಡು ದಿನ ಬಾಕಿ ಉಳಿದಿದೆ. ಒಟ್ಟು 30 ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಪ್ರಕಟಿಸಲಾಗಿದೆ.

ಒಟ್ಟು 30 ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆ. ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಅಭ್ಯರ್ಥಿಯು ಪಿಯುಸಿ ಉತ್ತೀರ್ಣಗೊಂಡು, ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣಗೊಂಡಿರಬೇಕು.

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 38 ವರ್ಷ, ಪ್ರವರ್ಗ 2ಎ , 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ. ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅಕ್ಟೋಬರ್​ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 29 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ lokayukta.karnataka.gov.in ವೆಬ್ ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...