ದೆಹಲಿ: ಕೇರಳದಲ್ಲಿ ಗುಡ್ಡಕುಸಿತದಿಂದ ಅಪಾರ ಪ್ರಮಾಣದ ಜೀವ ಹಾನಿ, ಆಸ್ತಿಪಾಸ್ತಿ ಹಾನಿಯಾಗಿರುವ ಹಿನ್ನೆಲೆ ಪರಿಹಾರ ಕಾರ್ಯದಲ್ಲಿ ನೆರವಾಗಲುಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ಪ್ರಯಾಣ ಬೆಳೆಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.
ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಕರ್ನಾಟಕ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯತಾ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ