spot_img
spot_img

KILLED IN PAKISTAN : ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ

spot_img
spot_img

Share post:

Balochistan, Pakistan News:

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಗಣಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್​ ಬಾಂಬ್​ ಸ್ಫೋಟಕ್ಕೆ ತುತ್ತಾಗಿದೆ. ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಟ್ರಕ್​​ನಲ್ಲಿ ಕರೆದೊಯ್ಯುವಾಗ ಬಾಂಬ್​ ಸ್ಫೋಟಗೊಂಡಿದೆ. ಐಇಡಿಯ ಬಾಂಬ್​​ ಅನ್ನು ರಸ್ತೆ ಬದಿಯಲ್ಲಿ ಅಡಗಿಸಿಟ್ಟಿರುವ ಸಾಧ್ಯತೆಗಳಿಂದಾಗಿ ಈ ದುರಂತ ಸಂಭವಿಸಿದೆ ಎಂದು ಹರ್ನಾಯಿ ಜಿಲ್ಲಾ ಆಯುಕ್ತರಾದ ಹಜರತ್​ ವಾಲಿ ಕಾಕರ್​ ತಿಳಿಸಿದ್ದಾರೆ KILLED IN PAKISTAN.

ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದ ಬಾಂಬ್​ ಸ್ಫೋಟಿಸಿ 9 ಕಾರ್ಮಿಕರು ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್​ ಪ್ರಾಂತ್ಯದಲ್ಲಿ ವರದಿಯಾಗಿದೆ. ಘಟನೆಯಲ್ಲಿ 9 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಾಯಗೊಂಡ ಏಳು ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ದಾಳಿಯ ಹೊಣೆಯನ್ನು ಯಾವುದೇ ಗುಂಪು ಹೊತ್ತಿಲ್ಲ. ಆದರೆ, ಬಲೂಚ್ ಲಿಬರೇಶನ್ ಆರ್ಮಿ ಇದೇ ರೀತಿ ಈ ಹಿಂದೆ ನಡೆದ ಕಾನೂನುಬಾಹಿರ ಕೃತ್ಯಗಳನ್ನು ಎಸೆಗಿದೆ ಎಂದು ಆರೋಪಿಸಲಾಗಿತ್ತು.

KILLED IN PAKISTAN ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಲೂಚಿಸ್ತಾನ್​ ಸರ್ಕಾರದ ವಕ್ತಾರ ಶಹೀದ್​, ಇದೊಂದು ದುರಂತ ಘಟನೆಯಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ. ಗಣಿ ಇಲಾಖೆ ಪ್ರಕಾರ, ಸಾವನ್ನಪ್ಪಿದವರೆಲ್ಲ ಖೈಬರ್​ ಪಖ್ತುಂಖ್ವಾದ ಸ್ವತ್​ ಮತ್ತು ಶಂಗಲ ಮೂಲದವರಾಗಿದ್ದಾರೆ.

KILLED IN PAKISTAN  ಬಲೋಚಿಸ್ಥಾನದ ಹರ್ನಾಯಿಯಲ್ಲಿ ಇದೇ ರೀತಿಯ ಬಾಂಬ್​​ ಸ್ಫೋಟದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿವೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಗಣಿ ಕೆಲಸಕ್ಕೆ ಅಡ್ಡಿ ಮಾಡುವ ಉದ್ದೇಶದಿಂದ ಈ ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಆರೋಪಿಸಲಾಗುತ್ತಿದೆ. ಮತ್ತೆ ಕೆಲವರು ಶಂಕಿಸದಂತೆ ಈ ಕೆಲಸಗಾರರು ಬಲೂಚಿಸ್ತಾನ ಮೂಲದವರಲ್ಲದ ಕಾರಣ ಈ ದಾಳಿ ನಡೆದಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿರಿ : Centre Sanctions Rs 529.50 Crore Loan For Wayanad Rehabilitation, To Be Utilised By Mar 31

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...