Bangalore News:
KMF NANDINI BRAND ನ ಇಡ್ಲಿ ಮತ್ತು ದೋಸೆ ಹಿಟ್ಟಿಗೆ ಬೆಂಗಳೂರಿನಲ್ಲಿ ಭಾರೀ ಬೇಡಿಕೆ ಕಂಡು ಬಂದಿದ್ದು, ಮೂರು ದಿನಗಳಲ್ಲಿ 2250 ಮೆಟ್ರಿಕ್ ಟನ್‌ಗಳಷ್ಟು ಮಾರಾಟವಾಗಿದೆ. ಕರ್ನಾಟಕ ಹಾಗೂ ಹೊರರಾಜ್ಯಗಳಲ್ಲಿ ಜನರ ಮನಗೆದ್ದಿರುವ ನಂದಿನಿ ಬ್ರ್ಯಾಂಡ್ ಇದೀಗ ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾಗಿದೆ.
ಇತ್ತೀಚೆಗಷ್ಟೇ ನಗರದಲ್ಲಿ ಪ್ರಾಯೋಗಿಕವಾಗಿ ಕೆಎಂಎಫ್ ಪರಿಚಯ ಮಾಡಿದ್ದ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಈ ಯಶಸ್ವಿ ಬೆನ್ನಲ್ಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಈ ಹಿಟ್ಟನ್ನು ವಿತರಿಸಲು ಕೆಎಂಎಫ್ ನಿರ್ಧಾರ ಮಾಡಿದೆ. KMF NANDINI BRAND ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ ಆರಂಭ ಮಾಡಿರುವ ದೋಸೆ ಹಿಟ್ಟು, ಇಡ್ಲಿ ಹಿಟ್ಟಿನ ಮಾರಾಟಕ್ಕೆ ಉತ್ತಮ ಬೇಡಿಕೆ ಕೇಳಿ ಬರುತ್ತಿದ್ದು, ಆರಂಭಿಸಿದ ಮೂರು ದಿನಗಳಲ್ಲೇ 2250 ಮೆಟ್ರಿಕ್ ಟನ್‌ಗಳಷ್ಟು ಹಿಟ್ಟು ಮಾರಾಟವಾಗಿದೆ.
ಭಾರೀ ಯಶಸ್ಸಿನ ಹಿನ್ನೆಲೆ ಮುಂದಿನ ಒಂದು ವಾರದೊಳಗೆ ಇತರ ಜಿಲ್ಲೆಗಳಲ್ಲೂ ನಂದಿನಿ ಹಿಟ್ಟಿನ ಮಾರಾಟ ಆರಂಭ ಮಾಡಲು ಕೆಎಂಎಫ್ ಮುಂದಾಗಿದೆ. ಈಗಾಗಲೇ ಹಲವು ಉತ್ತಮ ಗುಣಮಟ್ಟದ ಉತ್ಪನ್ನಗಳ ಮೂಲಕ ಜನರ ಮನಗೆದ್ದಿರುವ ನಂದಿನಿ ಬ್ರ್ಯಾಂಡ್, ಇದೀಗ ತನ್ನ ಹೊಸ ಪ್ರಾಡಕ್ಟ್ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಲು ಹೊರಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಡಿ.26ರಂದು KMF NANDINI BRAND ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ-ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ್ದರು.
Appreciation of CM:
ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದ ಸಿದ್ಧಪಡಿಸಲಾಗುತ್ತಿದೆ. ಹೀಗೆ ನಂದಿನಿಯ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್ ಹೆಮ್ಮರವಾಗಿ ಬೆಳೆಯುತ್ತಿದೆ” ಎಂದು ಬರೆದುಕೊಂಡಿದ್ದಾರೆ.ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದ ಅವರು ”ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಲ್ಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ.
ಇದನ್ನು ಒದಿರಿ : GRAMEEN BHARAT MAHOTSAV : ಜಾತಿ ರಾಜಕೀಯ ಹೆಸರಲ್ಲಿ ಕೆಲವರಿಂದ ಶಾಂತಿ ಕದಡುವ ಯತ್ನ