Kolkata Doctor Case:
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಸಮನ್ಸ್ ನೀಡಿ ಅವರನ್ನು ಕೋಲ್ಕತ್ತಾದ CBO ನಲ್ಲಿರುವ ಸಿಬಿಐ ಕಚೇರಿಗೆ ಕರೆದೊಯ್ದಿದ್ದಾರೆ.
ಅತ್ಯಾಚಾರ ಮತ್ತು ಕೊಲೆಯಾದ ನಂತರ!
ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಪ್ರಶಿಕ್ಷಣಾರ್ಥಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಾದ ಕೆಲವು ದಿನಗಳ ನಂತರ, ಸಂಸ್ಥೆಯ ಮಾಜಿ ಪ್ರಾಂಶುಪಾಲರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಮನ್ಸ್ ನೀಡಿದೆ. ವೈದ್ಯೆಯ ಮೇಲೆ ನಡೆದ ಭೀಕರ ಕೃತ್ಯವನ್ನು ಖಂಡಿಸಿ, ಮಹಿಳೆಯರು ಮಾತ್ರವಲ್ಲದೇ, ಇಡೀ ಕೋಲ್ಕತ್ತಾದಲ್ಲಿ (Kolkata Doctor Death Case) ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ವೈದ್ಯಕೀಯ ವಿಭಾಗದವರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.
ಸಂದೀಪ್ ಘೋಷ್‌ಗೆ ಸಮನ್ಸ್?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಸಮನ್ಸ್ ನೀಡಿ ಅವರನ್ನು ಕೋಲ್ಕತ್ತಾದ CBO ನಲ್ಲಿರುವ ಸಿಬಿಐ ಕಚೇರಿಗೆ ಕರೆದೊಯ್ದಿದ್ದಾರೆ. ಈತನ್ಮಧ್ಯೆ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಪ್ರಶಿಕ್ಷಣಾರ್ಥಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಾದ ಕೆಲವು ದಿನಗಳ ನಂತರ, ಸಂಸ್ಥೆಯ ಮಾಜಿ ಪ್ರಾಂಶುಪಾಲರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಮನ್ಸ್ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪ್ ಘೋಷ್‌ನನ್ನು ಸಿಬಿಐ ವಿಚಾರಣೆಗೆ ಒಳಪಡಿಸಲಿದೆ.
7 ಸಾವಿರ ಜನರು ಹೇಗೆ ಜಮಾಯಿಸಿದರು!
ಇಂದು ಈ ಪ್ರಕರಣದ ವಿಚಾರಣೆ ವೇಳೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಏಕಾಏಕಿ 7 ಸಾವಿರ ಜನರು ಹೇಗೆ ಜಮಾಯಿಸಿದರು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು. ಆಗ ಘಟನೆಯ ಬಗ್ಗೆ ನಮಗೆ ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ವಕೀಲರು ತಿಳಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಾಲಯ, 7000 ಜನರು ಹೀಗೆ ಏಕಾಏಕಿ ಜಮಾಯಿಸುವುದಿಲ್ಲ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳನ್ನು ನ್ಯಾಯಾಲಯದಲ್ಲಿ ತೋರಿಸಲಾಗಿದೆ ಎಂದು ಹೇಳಿತು. ಜೊತೆಗೆ ಈ ಪ್ರಕರಣದ ತನಿಖೆಯನ್ನು ನ್ಯಾಯಾಲಯ ಸಿಬಿಐಗೆ ವಹಿಸಿತು. ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಧ್ವಂಸಕ ಕೃತ್ಯದ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿತ್ತು.
ಕೊಲ್ಕತ್ತಾ ಹೈಕೋರ್ಟ್ ಹೇಳಿದ್ದೇನು?
ಈ ಪ್ರಕರಣದಲ್ಲಿ ಆರ್‌ಜಿ ಕರ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರನ್ನು ಸಿಬಿಐ ವಿಚಾರಣೆಗೆ ಕರೆದಿದೆ. ಕೊಲ್ಕತ್ತಾ ಹೈಕೋರ್ಟ್ ಸಿಬಿಐಗೆ ವಹಿಸಿದ ಕೆಲವೇ ಗಂಟೆಗಳಲ್ಲಿ ಸಿಬಿಐ ಅಧಿಕಾರಿಗಳು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಸಮನ್ಸ್ ನೀಡಿ ಅವರನ್ನು ಕೋಲ್ಕತ್ತಾದ CBO ನಲ್ಲಿರುವ ಸಿಬಿಐ ಕಚೇರಿಗೆ ಕರೆದೊಯ್ದಿರೋದು ಕುತೂಹಲ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಾಲಯ, 7000 ಜನರು ಹೀಗೆ ಏಕಾಏಕಿ ಜಮಾಯಿಸುವುದಿಲ್ಲ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳನ್ನು ನ್ಯಾಯಾಲಯದಲ್ಲಿ ತೋರಿಸಲಾಗಿದೆ ಎಂದು ಹೇಳಿತು. ಆಸ್ಪತ್ರೆಯೇ ಮುಚ್ಚಿದಾಗ ಇಂತಹ ಕೃತ್ಯಗಳು ನಡೆಯುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿತು. ಆಗಸ್ಟ್ 14 ರ ರಾತ್ರಿ ಐಜಿ ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯದ ವೀಡಿಯೊವನ್ನು ನ್ಯಾಯಾಲಯ ವೀಕ್ಷಿಸಿದೆ ಅನ್ನೋದು ಗಮನಾರ್ಹ. ಆಸ್ಪತ್ರೆಯೇ ಮುಚ್ಚಿದಾಗ ಇಂತಹ ಕೃತ್ಯಗಳು ನಡೆಯುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿತು. ಮಾಜಿ ಪ್ರಾಂಶುಪಾಲರ ಪರ ವಕೀಲರು, ನಮ್ಮ ಕಕ್ಷಿದಾರರು ಸಿಬಿಐ ತನಿಖೆಗೆ ಸಿದ್ಧರಿದದ್ಆರೆ, ಆದರೆ ಅವರ ಮನೆಯ ಹೊರಗೆ ನಿರಂತರ ಪ್ರತಿಭಟನೆ ನಡೆಯುತ್ತಿದೆ, ಅವರಿಗೆ ಭದ್ರತೆ ಸಿಕ್ಕರೆ ಇಂದೇ ಸಿಬಿಐ ಮುಂದೆ ಹಾಜರಾಗಬಹುದು ಎಂದು ಹೇಳಿದರು.
ಇನ್ನಷ್ಟು ಓದಿರಿ:
ಜಮ್ಮು ಕಾಶ್ಮೀರ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್.. 10 ವರ್ಷಗಳ ಬಳಿಕ 3 ಮಹತ್ವದ ಹೆಜ್ಜೆ; ಏನದು?
ಜಮ್ಮು ಕಾಶ್ಮೀರ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್.. 10 ವರ್ಷಗಳ ಬಳಿಕ 3 ಮಹತ್ವದ ಹೆಜ್ಜೆ; ಏನದು?