spot_img
spot_img

KSRTC EMPLOYEES STRIKE : ಡಿ.31ರಿಂದ ಸಾರಿಗೆ ನೌಕರರ ಮುಷ್ಕರ

spot_img
spot_img

Share post:

Bangalore News:

ಮಂಗಳವಾರದಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿಯ ಮುಷ್ಕರ ನಡೆಸಲಿದ್ದು, ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ನಾಳೆಗೆ(ಸೋಮವಾರ) ಮುಂದೂಡಲಾಗಿದೆ. “ಸರ್ಕಾರ ನಮ್ಮನ್ನು ಕರೆದು ಚರ್ಚಿಸಲಿ ಎನ್ನುವ ಕಾರಣಕ್ಕೆೆ ನೋಟಿಸ್ ನೀಡಿದ್ದೇವೆ. ಆದರೆ ಸರ್ಕಾರ ಈವರೆಗೆ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಬದಲಿಗೆ ಮುಷ್ಕರ ಮಾಡಿದರೆ ಎಸ್ಮಾ ಜಾರಿ ಮಾಡುತ್ತೇವೆ” ಎಂದು ಹೇಳಿದ್ದಾರೆ ಎಂದು ದೂರಿದ್ದಾರೆ.

KSRTC, BMTC, KKRTC, NWKRTC, ಸದಸ್ಯರನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘದ ಮುಖಂಡ ಹೆಚ್.ವಿ. ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ನಡೆಸಲಿರುವ ಸಭೆಯನ್ನು December 30ಕ್ಕೆೆ ಮುಂದೂಡಲಾಗಿದೆ.”ಸಿದ್ದರಾಮಯ್ಯ ಅವರು ಇಂತಹ ಸಾಹಸಕ್ಕೆೆ ಕೈ ಹಾಕುವುದಿಲ್ಲ ಎಂದು ತಿಳಿದುಕೊಳ್ಳುತ್ತೇನೆ. ನಮ್ಮ ಬೇಡಿಕೆಗಳು ಈಡೇರಿಲ್ಲ. ಹಾಗಾಗಿ ಮುಷ್ಕರ ಶತಸಿದ್ಧ.

ಮುಷ್ಕರ ಮಾಡಿಸುವುದು ತಪ್ಪಿಸುವುದು ಸಿಎಂ ಕೈಯಲ್ಲಿದೆ. ನಗದು ರಹಿತ ಆರೋಗ್ಯ ಚಿಕಿತ್ಸೆೆ ಯೋಜನೆಯನ್ನು ಏಕಕಾಲದಲ್ಲಿ 4 ನಿಗಮಗಳಲ್ಲಿ ಜಾರಿಗೆ ತರಬೇಕು. ಸಂಸ್ಥೆೆಯಲ್ಲಿ ವಿದ್ಯುತ್ ಚಾಲಿತ ಬಸ್ಸುಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿಯನ್ನು ಕೈಬಿಟ್ಟು, ಸಂಸ್ಥೆೆಯ ನೌಕರರು ಮತ್ತು ಸಿಬ್ಬಂದಿ ನಿರ್ವಹಣೆ ಮಾಡಬೇಕು. ಹೊರ ಗುತ್ತಿಗೆ ಆಧಾರದ ಮೇಲೆ ಚಾಲಕ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿಯನ್ನು ಕೈಬಿಡಬೇಕು ಎಂಬುದು ಸಾರಿಗೆ ನೌಕರರ ಆಗ್ರಹವಾಗಿದೆ” ಎಂದು ಕಾರ್ಮಿಕ ಮುಖಂಡ H.V.ಅನಂತ ಸುಬ್ಬರಾವ್ ಹೇಳಿದ್ದಾರೆ.

01-01-2020ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸುವುದು, ಸದ್ಯ ನೌಕರರು ಪಡೆಯುತ್ತಿರುವ ವಿವಿಧ ಭತ್ಯೆಗಳನ್ನು ಐದು ಪಟ್ಟು ಹೆಚ್ಚಳ ಮಾಡುವುದು, ಎಲ್ಲಾ ನೌಕರರಿಗೂ ಪ್ರತೀ ತಿಂಗಳೂ ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ ಎರಡು ಸಾವಿರ ರೂಪಾಯಿ ಜೊತೆಗೆ free ಔಷಧಿ ನೀಡುವುದು, ಇಎಸ್​ಐ ಮಾದರಿಯಲ್ಲಿ ನೌಕರರ ಮೂಲ ವೇತನದ ಶೇ.4.5 ಹಾಗೂ ನೌಕರರಿಂದ ಶೇ.0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕೊಡುವ ಯೋಜನೆ ರೂಪಿಸಬೇಕು. ನಿವೃತ್ತ ನೌಕರರು ಮತ್ತು ಅವರ ಪತಿ/ಪತ್ನಿ ಹಾಗೂ ಮಕ್ಕಳಿಗೂ ಆರೋಗ್ಯ ಯೋಜನೆ ನೀಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...