spot_img
spot_img

KUD SYLLABUS ISSUE : ಧಾರವಾಡ ಕವಿವಿ ಪಠ್ಯ ವಿವಾದ; ತಜ್ಞರ ಸಮಿತಿ ರಚನೆ

spot_img
spot_img

Share post:

Dharwad News:

ಧಾರವಾಡದ ಕರ್ನಾಟಕ ವಿವಿಯ ಪಠ್ಯ ವಿವಾದಕ್ಕೆ ಗುರಿಯಾಗಿದೆ. KUD SYLLABUS ISSUE ಈ ಬೆನ್ನಲ್ಲೇ ವಿವಿ ತಜ್ಞರ ಸಮಿತಿ ರಚಿಸಿದೆ. ಈ ಸಮಿತಿ ನೀಡುವ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಿದೆ. ಬಿಎ, ಬಿ ಮ್ಯೂಸಿಕ್, ಬಿಎಫ್ಎ, ಬಿಎಸ್​​ಡಬ್ಲ್ಯು, ಬಿವಿಎ, ಬಿಎಸ್​ಸಿ ಸೇರಿದಂತೆ ಕೆಲ ಪದವಿಗಳ ಪ್ರಥಮ ಸೆಮಿಸ್ಟರ್​​ನ ‘ಬೆಳಗು 1’ ಕನ್ನಡ ಪಠ್ಯ ಪುಸ್ತಕದಲ್ಲಿನ ರಾಷ್ಟ್ರೀಯ ಆಚರಣೆಯ ಸುತ್ತ ಎಂಬ ಅಧ್ಯಾಯದಲ್ಲಿನ ಕೆಲ ವಿಷಯಗಳು ಆಕ್ಷೇಪಾರ್ಹವಾಗಿವೆ.

ಈ ಪಠ್ಯ ಪುಸ್ತಕ ವಾಪಸ್ ಪಡೆದು, ಇದಕ್ಕೆ ಕಾರಣರಾದವರ ಮೇಲೆ ಶಿಸ್ತುಕ್ರಮ ಜರುಗಿಸಬೇಕೆಂದು ಹಿರಿಯ ನ್ಯಾಯವಾದಿ ಅರುಣ ಜೋಶಿ ಆಗ್ರಹಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಷಯದ ಪಠ್ಯ ವಿವಾದಕ್ಕೆ ಗುರಿಯಾಗಿದೆ. ವಿವಿಯ ಪ್ರಸಾರಂಗದಿಂದ ಮುದಿತ್ರವಾಗಿರುವ ಕನ್ನಡ ವಿಷಯದ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ವಿಷಯಗಳಿವೆ ಎಂಬ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುವ ಅದರಲ್ಲೂ ವಿಶ್ವವಿದ್ಯಾಲಯದಂತಹ ಸಂಸ್ಥೆಯಲ್ಲಿ ಈ ರೀತಿಯ ಪಾಠ ಸೇರಿಸಿರುವುದು ಸಂವಿಧಾನ ವಿರೋಧಿ, ದೇಶ ವಿರೋಧಿ ಮತ್ತು ಭಾರತದ ಏಕತೆಯ ವಿರೋಧಿಯಾಗಿದೆ. ಈ ಕುರಿತು ಶಿಸ್ತು ಕ್ರಮ ಆಗದಿದ್ದರೆ, ಕೋರ್ಟ್​ನಲ್ಲಿ ಪ್ರಕರಣ ದಾಖಲಿಸುತ್ತೇವೆ. ಜೊತೆಗೆ ರಾಜ್ಯಪಾಲರು ಮತ್ತು ಯುಜಿಸಿಗೂ ದೂರು ನೀಡುತ್ತೇವೆ ಎಂದು ಅರುಣ್ ಜೋಶಿ ತಿಳಿಸಿದ್ದಾರೆ.

Formation of Expert Committee:

ವಿವಿ ನಿಯಮಾನುಸಾರ ವಿಶೇಷ ಬಿಒಎಸ್ ಸಭೆ ನಡೆಸಿ, ಅವರು ನೀಡಿರುವ ನಿರ್ಣಯದ ಪ್ರಕಾರ ಡೀನ್ ಕಮಿಟಿಯಲ್ಲಿ ಚರ್ಚಿಸಿ, ಬೆಳಗು 1 ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಂವಿಧಾನದ ತಜ್ಞರು, ಕನ್ನಡ ಭಾಷಾ ತಜ್ಞರು ಸೇರಿದಂತೆ ನಾಲ್ವರು ವಿಷಯ ತಜ್ಞರಿದ್ದಾರೆ. ಈ ಸಮಿತಿ ಕೊಡುವ ವರದಿ ಮತ್ತು ಸಲಹೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಧಾರವಾಡದ ಕವಿವಿ ಕುಲಪತಿ ಡಾ. ಎಸ್. ಜಯಶ್ರೀ ಮಾಹಿತಿ ನೀಡಿದ್ದಾರೆ.

ಇದನ್ನು ಓದಿರಿ : KICHCHA SUDDEP : ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ ಸುದೀಪ್

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...