spot_img
spot_img

Kukke: ಕುಮಾರಧಾರ ನದಿ: ಕುಕ್ಕೆ ದೇವರಿಗೆ ನೌಕಾವಿಹಾರ, ಅವಭೃತೋತ್ಸವ

spot_img
spot_img

Share post:

ಸುಬ್ರಹ್ಮಣ್ಯ(ದ.ಕನ್ನಡ): ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಪೂರ್ಣಗೊಂಡಿದ್ದು ನಿನ್ನೆ ಕುಮಾರಧಾರಾದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ ಸಂಪನ್ನವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆದ ನಂತರದಲ್ಲಿ ಕುಮಾರಧಾರ ನದಿಯಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಜರುಗಿತು.

ಭಾನುವಾರ ಬೆಳಗ್ಗೆ ದೇವಳದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ನಡೆಯಿತು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರನ್ನು ಪಲ್ಲಕ್ಕಿಯಲ್ಲಿ ರಥಬೀದಿಗೆ ತಂದು, ನಂತರ ಬಂಡಿ ರಥದಲ್ಲಿ ಕುಮಾರಧಾರಾವರೆಗೆ ಅವಭೃತೋತ್ಸವದ ಸವಾರಿ ಮೆರವಣಿಗೆ ಮೂಲಕ ತರಲಾಯಿತು. ಈ ನಡುವೆ ಇಲ್ಲಿನ ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು.

ಕುಮಾರ ಪರ್ವತದ ತಪ್ಪಲಿನಲ್ಲಿ ಹುಟ್ಟಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಹರಿಯುವ ಪುಣ್ಯ ಕುಮಾರಧಾರಾ ನದಿಯ ಪವಿತ್ರ ತೀರ್ಥದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ಶ್ರೀ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ ನಡೆಯಿತು. ದೇವಳದ ಪ್ರಧಾನ ಅರ್ಚಕರು ದೇವರ ಅವಭೃತೋತ್ಸವದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಶ್ರೀ ದೇವರ ಜಳಕದ ಬಳಿಕ ಕುಮಾರಧಾರ ನದಿತೀರದ ಅವಭೃತಕಟ್ಟೆಯಲ್ಲಿ ವಿಶೇಷ ಕಟ್ಟೆಪೂಜೆ ನೆರವೇರಿಸಲಾಯಿತು. ನೆರೆದ ಭಕ್ತರ ನಡುವೆ ಕುಮಾರಧಾರಾ ನದಿಯಲ್ಲಿ ದೇಗುಲದ ಆನೆ ಯಶಸ್ವಿನಿ ನೀರಾಟವಾಡಿ ಖುಷಿಪಟ್ಟಿತು.

ಶ್ರೀ ಸ್ಕಂದ ಪುರಾಣದ ಸನತಕುಮಾರ ಸಂಹಿತೆಯಲ್ಲಿ ಸಹ್ಯಾದ್ರಿ ಖಂಡದ ತೀರ್ಥಕ್ಷೇತ್ರದ ಮಹಿಮಾ ರೂಪಣದೊಳಗೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಧಾರಾ ನದಿಯ ತೀರದಲ್ಲಿದೆ. ಶ್ರೀ ಷಣ್ಮುಖ ಸ್ವಾಮಿಯು ತಾರಕಾದಿ ಮಹಾ ಅಸುರರನ್ನು ನಿಗ್ರಹಿಸಿ ತಮ್ಮ ಶಕ್ತ್ಯಾಯುಧ ಧಾರೆಯನ್ನು ಈ ನದಿಯ ತೀರ್ಥದಲ್ಲಿ ತೊಳೆದುದರಿಂದ ಇದಕ್ಕೆ ಕುಮಾರಧಾರಾ ತೀರ್ಥವೆಂದು ಹೆಸರು ಬಂತೆಂದು ಪೌರಾಣಿಕ ಇತಿಹಾಸವಿದೆ.

ಸರ್ಪದೋಷ ಪೀಡಿತರಾಗಿ ವಿವಿಧ ಔಷಧಗಳಿಂದಲೂ ಶಮನವಾಗದಂತಹ ರೋಗಗಳಿಂದ ನರಳುವವರು ಹಾಗೂ ಸಂತಾನವಿಲ್ಲದೆ ಇರುವವರು ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸೇವಾ ಕೈಂಕರ್ಯಗಳನ್ನು ನೆರವೇರಿಸಿ ಸಕಲಾಭೀಷ್ಠ ಸಿದ್ಧಿಯನ್ನು ಹೊಂದುತ್ತಿರುವುದು ಪ್ರಸಿದ್ಧವಾಗಿದೆ.

ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವಗಳ ಕಾಲದಲ್ಲಿ ಭಕ್ತಾದಿಗಳು ತಮ್ಮ ಅನೇಕ ದೈಹಿಕ ಹಾಗೂ ಮಾನಸಿಕ ಸಂಕಷ್ಟಗಳ ನಿವಾರಣೆಗಾಗಿ ಹೇಳಿಕೊಂಡಿರುವ ಹರಕೆ ಕುಮಾರಧಾರಾದಿಂದ ಬೀದಿ ಮಡೆಸ್ನಾನ ಅಥವಾ ಉರುಳು ಸೇವೆ ಮಾಡುತ್ತಿರುವುದನ್ನು ಕಾಣಬಹುದು.

ಅಲ್ಲದೇ ಗೋವುಗಳ ಅನ್ನ ಸಂತರ್ಪಣೆಯ ಎಲೆಯಲ್ಲಿ ಹೊರಳಾಡಿಕೊಂಡು ದೇಗುಲದ ಅಂಗಣದಲ್ಲಿ ಪ್ರದಕ್ಷಿಣೆ ಬರುವ ಮಡೆಸ್ನಾನ ಸೇವೆಯು ಮುಖ್ಯ ಹರಕೆಗಳಲ್ಲಿ ಒಂದಾಗಿದೆ. “ಕುಮಾರಧಾರೆ ಮಿಂದೇವು, ಕುಕ್ಕೆಲಿಂಗನ ಕಂಡೇವು, ಕೊಪ್ಪರಿಗೆ ಅನ್ನ ಉಂಡೇವು” ಎಂಬ ಪೂರ್ವ ನಾಣ್ಣುಡಿಯಂತೆ ಇಲ್ಲಿ ಪ್ರತಿದಿನವೂ ತಪ್ಪದೆ ಇಲ್ಲಿ ಅನ್ನದಾನವೂ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಇತಿಹಾಸ ಪ್ರಸಿದ್ದ ಮೂಲಮೃತ್ತಿಕೆ (ಹುತ್ತದ ಮಣ್ಣು) ಇಲ್ಲಿಯ ಮುಖ್ಯ ಪ್ರಸಾದವಾಗಿರುತ್ತದೆ.

ಶ್ರೀ ಕ್ಷೇತ್ರವು ಪ್ರಸಿದ್ಧ ಕುಮಾರಧಾರ ನದಿ ತೀರದಲ್ಲಿದೆ. ದುಷ್ಟ ರಾಕ್ಷಸರ ದಮನಕ್ಕಾಗಿ ಜನ್ಮವೆತ್ತಿದ ಕುಮಾರಸ್ವಾಮಿಯು ತಾರಕಾದಿ ಅಸುರರನ್ನು ಯುದ್ಧದಲ್ಲಿ ಸಂಹರಿಸಿ, ಸೋದರ ಗಣಪತಿಯ ಜೊತೆ ಕುಮಾರಪರ್ವತಕ್ಕೆ ಬಂದಾಗ ದೇವೇಂದ್ರನು ತನ್ನ ಮಗಳಾದ ದೇವಸೇನೆಯನ್ನು ಕುಮಾರಸ್ವಾಮಿಗೆ ಕುಮಾರಧಾರ ತೀರ್ಥದ ತಟದಲ್ಲಿ ಮಾರ್ಗಶಿರ ಶುದ್ಧ ಷಷ್ಠಿಯ ದಿನ ವಿವಾಹ ಮಾಡಿಕೊಟ್ಟನು.

ಅದೇ ವೇಳೆ ಅಲ್ಲಿಯೇ ತಪಸ್ಸನ್ನಾಚರಿಸುತ್ತಿದ್ಧ ನಾಗರಾಜನಾದ ವಾಸುಕಿಯ ಪ್ರಾರ್ಥನೆಯನ್ನು ಮನ್ನಿಸಿ ಸುಬ್ರಹ್ಮಣ್ಯನು ತಾನು ದೇವಸೇನಾ ಸಮೇತನಾಗಿ ಒಂದಂಶದಿಂದ ಅವನಲ್ಲಿ ನಿತ್ಯ ಸನ್ನಿಹಿತನಾಗಿ ಈ ಕ್ಷೇತ್ರದಲ್ಲಿ ನೆಲೆಸುವುದಾಗಿ ವಾಸುಕಿಯನ್ನು ಹರಸುತ್ತಾನೆ. ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪುರಾಣ, ಇತಿಹಾಸ ಕಾಲಗಳಿಂದಲೂ ನಾಗಾರಾಧನೆಗೆ ಪ್ರಸಿದ್ಧಿಯಾಗಿದೆ.

ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ ಇತ್ಯಾದಿ ಪ್ರಮುಖ ಹರಕೆ ಸೇವೆಗಳನ್ನು ಭಕ್ತರು ಇಲ್ಲಿ ನಡೆಸಿ ಕೃತಾರ್ಥರಾಗುತ್ತಾರೆ. ಬಳಿಕ ಕುಮಾರಧಾರ ನದಿಯ ಮತ್ಸ್ಯತೀರ್ಥದಲ್ಲಿ ಪುಷ್ಪಾಲಂಕೃತವಾಗಿ ಸಿಂಗರಿಸಲ್ಪಟ್ಟ ಎರಡು ದೋಣಿಗಳನ್ನು ಜೋಡಿಸಿ ಮಾಡಿದ ಸುಂದರ ತೆಪ್ಪದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ನಡೆಯಿತು. ಕುಮಾರಧಾರೆಯ ಜಳಕದಗುಂಡಿಯಲ್ಲಿ ನೂರಾರು ಭಕ್ತರ ಸಾನಿಧ್ಯದಲ್ಲಿ ದೇಗುಲದ ಪುರೋಹಿತರ ಮಂತ್ರ ಘೋಷದೊಂದಿಗೆ ಅವಭೃತೋತ್ಸವ ಜರುಗಿತು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...