ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಲ್ಫ್ ಏರ್ ವಿಮಾನ ಕುವೈತ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕಾಣಿಸಿಕೊಂಡ ಪ್ರಯಾಣಿಕರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.
ಮುಂಬೈನಿಂದ ಮ್ಯಾಂಚೆಸ್ಟರ್ ಗೆ ತೆರಳುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ ನಂತರ ಸುಮಾರು 60 ಭಾರತೀಯ ಪ್ರಯಾಣಿಕರು 13 ಗಂಟೆಗಳ ಕಾಲ ಕುವೈತ್ ವಿಮಾನ ನಿಲ್ದಾಣದಲ್ಲಿ ಸಿಲುಕಿ ಪರಿತಪಿಸುವಂತಾಯಿತು.
ಅಂದಹಾಗೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಲ್ಫ್ ಏರ್ ವಿಮಾನ ಕುವೈತ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕಾಣಿಸಿಕೊಂಡ ಪ್ರಯಾಣಿಕರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.
ಈ ಸಂದರ್ಭದಲ್ಲಿ ಆಹಾರ ಅಥವಾ ಯಾವುದೇ ನೆರವು ಸಿಗಲಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಕೊನೆಗೆ ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರಯಾಣಿಕರ ರಕ್ಷಣೆಗೆ ಧಾವಿಸಿದೆ.
ಯುರೋಪಿಯನ್ ಯೂನಿಯನ್, ಅಮೆರಿಕದ ಪ್ರಯಾಣಿಕರಿಗೆ ಮಾತ್ರ ವಿಮಾನಯಾನ ಸಂಸ್ಥೆಯಿಂದ ವಸತಿ ಸೌಕರ್ಯ ನೀಡಿದ್ದು, ಭಾರತ, ಪಾಕಿಸ್ತಾನಿ ಮತ್ತು ಇತರ ಆಗ್ನೇಯ ಏಷ್ಯಾದ ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಪ್ರಯಾಣಿಕರು ಪಕ್ಷಪಾತ ಮತ್ತು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಅವರು ಆರೋಪಿಸಿದ್ದರು.
ಈ ವೇಳೆ ಮಧ್ಯ ಪ್ರವೇಶಿಸಿದ ಕುವೈತ್ ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿ ತಂಡ, ವಿಮಾನ ನಿಲ್ದಾಣಕ್ಕೆ ತಲುಪಿ ಪ್ರಯಾಣಿಕರಿಗೆ ನೆರವಾಗಿದ್ದಾರೆ. ವಿಮಾನಯಾನ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದ್ದು, ಎರಡು ವಿಮಾನ ನಿಲ್ದಾಣದ ಲಂಗೇಜ್ ನಲ್ಲಿ ಪ್ರಯಾಣಿಕರು ತಂಗಲು ಅವಕಾಶ ಮಾಡಿಕೊಟ್ಟಿದ್ದು, ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿದ್ದಾರೆ. ಕೊನೆಗೆ ಸ್ಥಳೀಯ ಕಾಲಮಾನ ಬೆಳಗ್ಗೆ 4-34ಕ್ಕೆ ಗಲ್ಫ್ ಏರ್ ವಿಮಾನ ಮ್ಯಾಂಚೆಸ್ಟೆರ್ ಗೆ ನಿರ್ಗಮಿಸಿತು ಎಂದು ರಾಯಭಾರಿ ಅಧಿಕಾರಿಗಳು ತಿಳಿಸಿದ್ದಾರೆ.