Mysore News:
ಇನ್ಫೋಸಿಸ್ ಕ್ಯಾಂಪಸ್‌ನ ಬಳಿ ಮುಂಜಾನೆ ಚಿರತೆ ಪ್ರತ್ಯಕ್ಷವಾಗಿದ್ದು, ಇಂದು ವರ್ಕ್ ಫ್ರಮ್ ಹೋಂ ಮಾಡುವಂತೆ ಕಂಪನಿಯು ಉದ್ಯೋಗಿಗಳಿಗೆ ಸೂಚಿಸಲಾಗಿದೆ. ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆಯಿಂದ ಪ್ರಕಟಣೆ ಹೊರಡಿಸಲಾಗಿದೆ.
ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ ಬಳಿ ಇಂದು ಮುಂಜಾನೆ ಚಿರತೆ ಪ್ರತ್ಯಕ್ಷವಾಗಿದ್ದು, ಕ್ಯಾಂಪಸ್‌ನ ಸಿಸಿಟಿವಿಯಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಇದರಿಂದ ಆಡಳಿತ ಮಂಡಳಿಯು ಇಂದು ಮನೆಯಿಂದ ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚಿಸಿದೆ.ಚಿರತೆ ಚಲನವಲನ ಆಧರಿಸಿ ಅದನ್ನು ಸೆರೆ ಹಿಡಿಯಲು ಕಾರ್ಯ ತಂತ್ರವನ್ನು ರೂಪಿಸುತ್ತಿದೆ.
ಡಿಸಿಎಫ್ ಬಸವರಾಜ್ ನೇತೃತ್ವದಲ್ಲಿ ಸೆರೆ ಕಾರ್ಯಾಚರಣೆ ನಡೆಯುತ್ತಿದೆ. ಈ ಮಾಹಿತಿ ಆಧರಿಸಿ ಮೈಸೂರು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅರವಳಿಕೆ ತಜ್ಞರ ತಂಡ, ಚಿರತೆ ಕಾರ್ಯಪಡೆಯ ತಂಡ ಇನ್ಫೋಸಿಸ್ ಕ್ಯಾಂಪಸ್ಗೆ ಆಗಮಿಸಿದ್ದರು. “ಇನ್ಫೋಸಿಸ್ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಡಿಸಿಎಫ್ ಬಸವರಾಜ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.