Bangalore/Raichur/Belagavi News:
ಬೆಂಗಳೂರಿನ ಹೆಬ್ಬಾಳದಲ್ಲಿರುವ ಬಿಬಿಎಂಪಿ ವಲಯದ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಅವರ ವಿದ್ಯಾರಣ್ಯಪುರದ ನಿವಾಸ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಸೆಕ್ರೆಟರಿ ಟಿ.ಕೆ.ರಮೇಶ್ ನಿವಾಸ, ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶಿವಲಿಂಗಯ್ಯ ಹಿರೇಮಠ ಅವರ ನಿವಾಸ, ಬೆಳಗಾವಿ ಉತ್ತರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಸಚಿನ್ ಮಾಂಡೆದ್, ಬೆಳಗಾವಿಯ ರಾಯಭಾಗದ ವೆಟರ್ನರಿ ಇನ್ಸ್‌ಪೆಕ್ಟರ್ ಸಂಜಯ್ ಅಣ್ಣಪ್ಪ ದುರ್ಗಣ್ಣವರ್ ನಿವಾಸ ಸೇರಿ ವಿವಿಧೆಡೆ LOKAYUKTA RAID ಮಾಡಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 7 ಕಡೆಗಳಲ್ಲಿ LOKAYUKTA RAID ನಡೆಸಿದ್ದಾರೆ.
ಬೆಂಗಳೂರು ಹಾಗೂ ಬೆಳಗಾವಿಯ ಎರಡು ಸ್ಥಳಗಳು, ಚಿತ್ರದುರ್ಗ, ಬಾಗಲಕೋಟೆ, ರಾಯಚೂರು ಜಿಲ್ಲೆಯ ತಲಾ ಒಂದೊಂದು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಅಧಿಕಾರಿಗಳು ಶೋಧ ಕಾರ್ಯದಲ್ಲಿದ್ದಾರೆ. LOKAYUKTA RAID ಬೆಂಗಳೂರು ಸೇರಿದಂತೆ 5 ಜಿಲ್ಲೆಗಳ ವಿವಿಧೆಡೆ ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿ, ಪರಿಶೀಲನೆ ಮಾಡುತ್ತಿದ್ದಾರೆ.
Attack on GP Accounts Assistant Officer:
ರಾಯಚೂರು ಜಿ.ಪಂ.ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್ ಅವರ ರಾಯಚೂರಿನ ಜವಾರ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
Shock for two officers of Belgaum:
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ, ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮನೆ ಮೇಲೆ ದಾಳಿ ಮಾಡಲಾಗಿದೆ. ಅನಗೋಳ, ಹಾರೋಗೇರಿ, ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆದಿದೆ.
Lokayukta attack on PDO:
ಬಾದಾಮಿ ತಾಲೂಕಿನ ಹೂಲಗೇರಿ ಗ್ರಾ.ಪಂ ಪಿಡಿಒ ಶಿವಲಿಂಗಯ್ಯ ಹಿರೇಮಠ ಅವರಿಗೆ ಸಂಬಂಧಿಸಿದ ಮೂರು ಕಡೆ ದಾಳಿಯಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿನ ಮತ್ತು ನರಗುಂದದ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದ ತಂಡ ದಾಳಿ ಮಾಡಿ, ಪರಿಶೀಲನೆ ನಡೆಸಿದೆ.
ಇದನ್ನು ಓದಿರಿ : MOTHER AND DAUGHTER DEAD BODY : ಮಧ್ಯರಾತ್ರಿ ಮೃತದೇಹಗಳ ಆಗಮನ, ಡಿಸಿ ನಮನ