Prayagraj (Uttar Pradesh) News:
ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಈಗಾಗಲೇ ಭರವಸೆ ನೀಡಿದ್ದಾರೆ.
MAHAKUMBH ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದಾದ ಸಾವು ನೋವಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಗಾಯಾಳುಗಳು ಶೀಘ್ರ ಚೇತರಿಕೆ ಕಾಣಲಿ ಎಂದು ಹಾರೈಸಿದ್ದಾರೆ.MAHAKUMBH ಮೇಳದಲ್ಲಿ ಕಳೆದ ರಾತ್ರಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಪ್ರಧಾನಿ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.
ಇದರ ನಡುವೆ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕೆ ಮುಂದಾಗಿದ್ದಾರೆ.ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಈಗಾಗಲೇ ಭರವಸೆ ನೀಡಿದ್ದಾರೆ.ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್ರಾಜ್ MAHAKUMBHದಲ್ಲಿ ನಡೆದ ಅವಘಡ ಬೇಸರದ ಸಂಗತಿ.
ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸುತ್ತೇನೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ಸಹಾಯಕ್ಕೆ ಸ್ಥಳೀಯ ಆಡಳಿತ ಮುಂದಾಗಿದೆ. ಈ ಕುರಿತು ಸಿಎಂ ಯೋಗಿ ಅವರೊಂದಿಗೆ ನಿರಂತರವಾಗಿ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Rahul Gandhi comments:ಇದೇ ವೇಳೆ ಇಂದೂ ಕೂಡ ಈ ರೀತಿಯ ಘಟನೆ ಸಂಭವಿಸುವುದನ್ನು ತಪ್ಪಿಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಕೂಡ ಸಂತ್ರಸ್ತರ ಕುಟುಂಬಕ್ಕೆ ನೆರವಾಗುವಂತೆ ಕರೆ ನೀಡಿದ್ದಾರೆ.
ಕಾಲ್ತುಳಿತ ಘಟನೆಗೆ ವಿಷಾದ ವ್ಯಕ್ತಪಡಿಸಿ ಪ್ರತಿಕ್ರಿಯಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಿಐಪಿಗಳಿಗೆ ಹೆಚ್ಚಿನ ಗಮನ ನೀಡಿ, ಸಾಮಾನ್ಯ ಭಕ್ತರ ನಿರ್ಲಕ್ಷ್ಯಿಸಿದ್ದೇ ಘಟನೆಗೆ ಕಾರಣ ಎಂದು ಟೀಕಿಸಿದ್ದಾರೆ.
360 Train to Prayagraj:ಬುಧವಾರ 190 ವಿಶೇಷ ರೈಲುಗಳ ಕಾರ್ಯಾಚರಣೆಗೆ ಯೋಜನೆ ರೂಪಿಸಲಾಗಿದ್ದು, ವಿಶೇಷ ರೈಲುಗಳನ್ನು ರದ್ದು ಮಾಡುವ ಯಾವುದೇ ಯೋಚನೆ ಇಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಹಿಂದುಗಳ ಪವಿತ್ರ ಸ್ನಾನಕ್ಕೆ ಉತ್ತಮವೆಂದು ಪರಿಗಣಿಸಲ್ಪಟ್ಟ ದಿನಗಳಲ್ಲಿ ಮೌನಿ ಅಮವಾಸ್ಯೆ ಕೂಡ ಒಂದು. ಈ ದಿನ ಭಕ್ತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅವರ ಪ್ರಯಾಣಕ್ಕೆ ಅನುಗುಣವಾಗಿ ಪ್ರಯಾಗ್ರಾಜ್ ಜಿಲ್ಲೆಯಲ್ಲಿ ವಿವಿಧ ಸ್ಟೇಷನ್‌ಗಳಲ್ಲಿ ಒಂದೇ ದಿನದಲ್ಲಿ 360 ರೈಲುಗಳ ಸೇವೆ ಒದಗಿಸಲು ರೈಲ್ವೇ ಇಲಾಖೆ ಮುಂದಾಗಿದೆ.
ಇದನ್ನು ಓದಿರಿ :COLDPLAY ROCK BAND:ಕ್ರಿಕೆಟಿಗ ಬುಮ್ರಾರನ್ನು ಹಾಡುಗಳ ಮೂಲಕವೇ ಗೌರವಿಸಿದ ಸಿಂಗರ್.