spot_img
spot_img

ಈದ್ ಆಚರಣೆ ವೇಳೆ ಮಂಗಳೂರು VHP ಪ್ರತಿಭಟನೆ; ಬಿ ಸಿ ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ, ಮದ್ಯ ನಿಷೇಧ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಇಂದು ಬೆಳಗ್ಗೆ ಬಿಸಿ ರೋಡ್ ನ ರಕ್ತೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಹಿಂದೂ ಕಾರ್ಯಕರ್ತರು, ಷರೀಫ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಬಳಸಿ ಅವರನ್ನು ಮುಂದೆ ಸಾಗದಂತೆ ತಡೆದರು.

ಇದನ್ನೂ ಓದಿ : ಮಹಿಳೆಯರು ಇಲ್ಲದೇ ಕನ್ನಡ ಸಿನಿಮಾ ಮಾಡ್ತಾರಂತೆ: ಕವಿತಾ ಲಂಕೇಶ್ ಹೇಳಿದ್ದೇನು?

ಮಂಗಳೂರು: ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಹಾಗೂ ಬಂಟ್ವಾಳ ಟಿಎಂಸಿ ಮಾಜಿ ಅಧ್ಯಕ್ಷ ಮೊಹಮ್ಮದ್‌ ಶರೀಫ್‌ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಬಿಸಿ ರೋಡ್‌ನಲ್ಲಿ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಗಣೇಶ ಚತುರ್ಥಿ ಮೆರವಣಿಗೆಯ ದಿನದಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮು ಘರ್ಷಣೆಯನ್ನು ಖಂಡಿಸಿ ತಾವು ಪ್ರತಿಭಟನೆ ನಡೆಸುತ್ತಿದ್ದು, ಈದ್ ಮಿಲಾದ್ ರ್ಯಾಲಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದ ಶರಣ್ ಪಂಪ್‌ವೆಲ್, ಈದ್ ಮೆರವಣಿಗೆಯನ್ನು ಬೇಕಾದರೆ ನಿಲ್ಲಿಸಬಹುದು ಎಂದು ಹೇಳಿದ್ದರು.

ಇದನ್ನೂ ಓದಿ : ಹಿಂದೂ-ಮುಸ್ಲಿಂ ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ.! ಅಂಗಡಿ ವಾಹನಗಳಿಗೆ ಬೆಂಕಿ ಹಚ್ಚಲಾಗಿ.!

ಶರಣ್ ಪಂಪ್‌ವೆಲ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ವೈರಲ್ ಆದ ಆಡಿಯೋ ಸಂದೇಶದಲ್ಲಿ, ಶರಣ್ ಪಂಪ್‌ವೆಲ್‌ ಬಿ ಸಿ ರೋಡ್‌ಗೆ ಬಂದು ಸೋಮವಾರ ಈದ್ ರ್ಯಾಲಿಯನ್ನು ತಡೆಯಲಿ ಎಂದು ಶರೀಫ್ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ್ ಸೇರಿದಂತೆ ಹಲವು ಹಿಂದುತ್ವ ಕಾರ್ಯಕರ್ತರು ಬಿಸಿ ರೋಡ್ ಚಲೋ ನಡೆಸಿದರು.

ಇಂದು ಬೆಳಗ್ಗೆ ಬಿಸಿ ರೋಡ್ ನ ರಕ್ತೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಹಿಂದೂ ಕಾರ್ಯಕರ್ತರು, ಷರೀಫ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಬಳಸಿ ಅವರನ್ನು ಮುಂದೆ ಸಾಗದಂತೆ ತಡೆದರು.

ನಾವು ಸವಾಲು ಸ್ವೀಕರಿಸಿ ಬಿಸಿ ರೋಡ್‌ಗೆ ಆಗಮಿಸಿದ್ದೇವೆ ಮತ್ತು ನಾವು ಈ ಹಿಂದೆಯೂ ಇಂತಹ ಸವಾಲುಗಳನ್ನು ಎದುರಿಸಿದ್ದೇವೆ ಮತ್ತು ಅನೇಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಯಾವುದೇ ಆಹ್ವಾನ ನೀಡದಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿರುವುದು ಹಿಂದುತ್ವದ ವಿಜಯವಾಗಿದೆ ಎಂದು ಶರಣ್ ಪಂಪ್‌ವೆಲ್‌ ಹೇಳಿದ್ದಾರೆ.

ಪಶ್ಚಿಮ ವಲಯದ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿಪಿ) ಅಮಿತ್ ಸಿಂಗ್, ದಕ್ಷಿಣ ಕನ್ನಡ ಎಸ್ಪಿ ಯತೀಶ್ ಎನ್, ಸಹಾಯಕ ಆಯುಕ್ತ ಹರ್ಷವರ್ಧನ್ ಮತ್ತು ತಹಶೀಲ್ದಾರ್ ಅರ್ಚನಾ ಭಟ್ ಅವರು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ : ಮೋದಿ ಸರ್ಕಾರ ಕೈಗೊಂಡ ಮಹತ್ವದ ತೀರ್ಮಾನಗಳು ಏನು? ಕೇಂದ್ರ ಸರ್ಕಾರದ ಮೆಗಾ ಪ್ಲಾನ್‌ ಏನು?

ಏತನ್ಮಧ್ಯೆ, ಪೊಲೀಸರು ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಿ, ಹಿಂದುತ್ವವಾದಿಗಳು ಜಮಾಯಿಸಿದ ಬಿ ಸಿ ರೋಡ್ ಮೂಲಕ ಈದ್ ಮಿಲಾದ್ ಮೆರವಣಿಗೆಗೆ ಹೋಗಲು ಅನುಮತಿ ನಿರಾಕರಿಸಿದರು. ನಂತರ ಕೆಲ ಯುವಕರು ಹಸಿರು ಬಾವುಟ ಹಿಡಿದು ಹೆದ್ದಾರಿಯಲ್ಲಿ ಎರಡು ಬಾರಿ ಬೈಕ್ ರ್ಯಾಲಿ ನಡೆಸಿದರು.

ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಬಂಟ್ವಾಳ ಟಿಎಂಸಿ ಮಿತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯ ನಿಷೇಧ ಹೇರಿದ್ದಾರೆ.

ಸ್ಥಳದಲ್ಲಿ ಆರು ಕರ್ನಾಟಕ ರಾಜ್ಯ ಮೀಸಲು ಪೊಲೀಸ್(KSRP) ಪಡೆ, 4 ಜಿಲ್ಲಾ ಸಶಸ್ತ್ರ ಮೀಸಲು(DAR) ಪಡೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ(RAF)ಯ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...